1:57 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯ ಬೆತ್ತಲೆ ವೀಡಿಯೊ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಆರೋಪ: ಪ್ರತೀಕ್ ಗೌಡ ಬಂಧನ; ಈತ ಎಬಿವಿಪಿ ಮುಖಂಡನೇ?

19/06/2023, 16:22

ಶಿವಮೊಗ್ಗ(reporterkarnataka.com): ಕಾಲೇಜು ವಿದ್ಯಾರ್ಥಿನಿಯೊಬ್ಬಳ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಪ್ರತೀಕ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಎನ್ನಲಾಗಿದೆ. ಆದರೆ ಎಬಿವಿಪಿಯು ತಮ್ಮ ಸಂಘಟನೆಗೂ ಆರೋಪಿ ಪ್ರತೀಕ್ ಗೌಡನಿಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದೆ.

ಪ್ರತೀಕ್ ಗೌಡ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ
ಯುವತಿಯೊಬ್ಬಳಿಗೆ ವೀಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದನು. ಅದನ್ನು ರೆಕಾರ್ಡ್ ಮಾಡಿದ ನಂತರ
ಹಣ ನೀಡುವಂತೆ ಯುವತಿಯನ್ನು ಬ್ಲಾಕ್‌ ಮಾಡಲಾರಂಭಿಸಿದನು. ವಿದ್ಯಾರ್ಥಿನಿ ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ಆತ
ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದನು ಎಂದು ಆರೋಪಿಸಿ ಆತನ ಮೇಲೆ ದೂರು ನೀಡಿತ್ತು.
ಈ ನಡುವೆ ಪ್ರತೀಕ್ ಗೌಡ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತೀರ್ಥಹಳ್ಳಿ ಎಬಿವಿಪಿ ಘಟಕವು ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ. ಆದರೆ ಪ್ರತೀಕ್ ಗೌಡ ಎಬಿವಿಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹಲವು ಫೋಟೋಗಳು ಲಭ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು