ಇತ್ತೀಚಿನ ಸುದ್ದಿ
ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆ ಪ್ರತಿಪಾದಕನ ಆಹ್ವಾನಕ್ಕೆ ಎನ್ ಎಸ್ ಯುಐ ವಿರೋಧ
22/06/2023, 19:25
ಮಂಗಳೂರು(reporterkarnataka.com): ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆಯ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಿದಕ್ಕೆ ದ.ಕ ಜಿಲ್ಲಾ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು.
ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದಲೇ ಆಗುತ್ತದೆ.
ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ. ದ.ಕ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಸಹಾಯ ಆಯುಕ್ತರಿಗೆ ಮನವಿ ನೀಡಿಲಾಗಿದೆ. ಶ್ರೀಕಾಂತ್ ಶೆಟ್ಟಿ ಬಂದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಎಚ್ಚರಿಕೆ ನೀಡಿದ್ದಾರೆ.