ಇತ್ತೀಚಿನ ಸುದ್ದಿ
ಮಂಗಳೂರು ವಿವಿ ಕಾಲೇಜು ಪ್ರತಿಭಾ ದಿನಾಚರಣೆ, ವಾರ್ಷಿಕೋತ್ಸವ ಮುಂದೂಡಿಕೆ
22/06/2023, 20:43
ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 23 ಮತ್ತು 24ರಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗುವಂತೆ ಕಾಲೇಜಿನ ಪ್ರಿನ್ಸಿಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.