ಇತ್ತೀಚಿನ ಸುದ್ದಿ
ಪಿಲಿಕುಳದಲ್ಲಿ ನಾಳೆಯಿಂದ 2 ದಿನಗಳ ಕಾಲ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳ
23/06/2023, 19:16

ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.24 ಹಾಗೂ 25ರಂದು ಎರಡು ದಿನಗಳ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಉಪಸ್ಥಿತರಿರುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕ ಉಮನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ
ಕೋಟ ಶ್ರೀನಿವಾಸ್ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ., ಮಂಜುನಾಥ ಭಂಡಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡುಶೆಡ್ಡೆ ಗ್ರಾಮ ಪಂಚಾಯತ್‍ನ ಅಧ್ಯಕ್ಷೆಯಾದ ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.