3:29 AM Friday28 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮರಳಿ: ರೈತರ ಹಣದಿಂದ ರಸ್ತೆ ದುರಸ್ತಿ ಕಾರ್ಯ; ತಿರುಗಿ ನೋಡದ ಅಧಿಕಾರಿಗಳು, ಕೆಲಸಕ್ಕೆ ಬಾರದ ಜನಪ್ರತಿನಿಧಿಗಳು

21/07/2021, 07:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಹೂನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮರಳಿ ಗ್ರಾಮದ ರೈತರ ಹೊಲಗಳಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿ ರೈತರು ಹೊಲಗಳಿಗೆ ಹೋಗಲು ಹರಸಹಾಸ ಪಡುವಂತಾಗಿದೆ.


ಗ್ರಾಮದ ರೈತರು ಜನಪ್ರತಿನಿಧಿಗಳಿಗೆ ಮತ್ತು ಹೂನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ರಸ್ತೆ ದುರಸ್ತಿ ಮಾಡುವಂತೆ ಅನೇಕ ಬಾರಿ ಮನವಿ ಮಾಡಿದರೂ ಏನೂ ಪ್ರಯೋಜವಾಗಿಲ್ಲ. ಈ ಹಿನ್ನೆಲೆಯಲ್ಲಿ ಮರಳಿ ಗ್ರಾಮದ ರೈತರು ಪ್ರತಿ ಮನೆ ಮನೆಗೆ  ಹೋಗಿ ಹಣ ಸೇರಿಸಿಕೊಂಡು  ರಸ್ತೆ ದುರಸ್ತಿ ಮಾಡಿಕೊಂಡಿದ್ದಾರೆ. 

ಇದೆ ಸಂದರ್ಭದಲ್ಲಿ ಮರಳಿ ಗ್ರಾಮದ ರೈತರಾದ ಕರಿಯಪ್ಪಗೌಡ, ಹನುಮಂತ, ಶರಣ ಬಸವ, ಬಸವರಾಜ, ಮುತ್ತಣ್ಣ, ಬಸವರಾಜ, ಬಸನಗೌಡ ಮಾಲಿ ಪಾಟೀಲ್, ಸಿದ್ದಪ್ಪ ಅಮರೇಶ, ದೊಡ್ಡಬಸಪ್ಪ ಹಾಗೂ ಗ್ರಾಮಸ್ಥರು  ಸೇರಿದಂತೆ ಇನ್ನಿತರ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು