7:43 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಸೇರಿದಂತೆ ಕೋವಿಡ್-19 ಮಾರ್ಗಸೂಚಿ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

21/07/2021, 08:25

ಮಂಗಳೂರು(reporterkarnataka news): ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ.  

 ಸರ್ಕಾರದ ಆದೇಶ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. 

ಮಾರ್ಗಸೂಚಿಗಳ ವಿವರ ಇಂತಿದೆ:

ಜಿಲ್ಲೆಯಾದ್ಯಂತ ಈಗಾಗಲೇ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ವಿಧಿಸಲಾಗುವುದು. 

ಕೋವಿಡ್ ಸಮುಚಿತ ವರ್ತನೆ ಮತ್ತು ಸಂಬಂಧಪಟ್ಟ ಇಲಾಖೆಗಳು ಹೊರಡಿಸುವ ಎಸ್.ಓ.ಪಿ. ಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗಳಪಟ್ಟು ಸಿನೆಮಾ ಹಾಲ್‍ಗಳು, ಮಲ್ಟಿಪ್ಲೆಕ್ಸ್‍ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಸಭಾಂಗಣಗಳು ಮತ್ತು ಸಭಾಂಗಣದಂತಹ ಇತರ ಸ್ಥಳಗಳಿಗೆ ಆಸನ ಸಾಮಥ್ರ್ಯದ ಶೇ.50 ರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. 

ಕೋವಿಡ್ ಸಮುಚಿತ ವರ್ತನೆ ಮತ್ತು ಸಂಬಂಧಪಟ್ಟ ಇಲಾಖೆಗಳು ಹೊರಡಿಸುವ ಎಸ್.ಓ.ಪಿ. ಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗಳಪಟ್ಟು ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಸಂಸ್ಥೆಗಳನ್ನು 2021ರ ಜುಲೈ 26 ರಿಂದ ಮರು ಪ್ರಾರಂಭಿಸಲು ಅನುಮತಿಸಲಾಗಿದೆ. ಕೋವಿಡ್-19 ಲಸಿಕೆಯ ಕನಿಷ್ಟ ಒಂದು ಡೋಸ್ ಪಡೆದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ, ಇತರ ಸಿಬ್ಬಂದಿಗಳಿಗೆ ಮಾತ್ರ ಕಾಲೇಜು, ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿಗಳ ಹಾಜರಾತಿಯು ಐಚ್ಛಿಕವಾಗಿರುತ್ತದೆ. 

ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೀರ್ಘಾವಧಿಯ ತಾಂತ್ರಿಕ ಕೋರ್ಸ್‍ಗಳನ್ನು ಒಳಗೊಂಡಂತೆ ಎಲ್ಲಾ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಅನುಮತಿಸಲಾಗಿದೆ. ಕೋವಿಡ್-19 ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ, ಇತರ ಸಿಬ್ಬಂದಿಗಳಿಗೆ ಮಾತ್ರ ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. 

2021ರ ಜುಲೈ 3 ರಂದು ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ಆದೇಶಗಳು ಮತ್ತು ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳು ಅನುಸರಿಸಬೇಕಾದ ಕೋವಿಡ್-19 ವಿಶೇಷ ಕಣ್ಗಾವಲು ಕ್ರಮಗಳು ಮುಂದಿನ ಆದೇಶದವರೆಗೆ ಅನ್ವಯಿಸುವುದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು