2:02 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಡಿ.ಕೆ. ಶಿವಕುಮಾರ್ ಅವರು ಆ್ಯಕ್ಟಿಂಗ್ ಸಿಎಂ ರೀತಿ ವರ್ತಿಸುತ್ತಿದ್ದಾರೆ: ಮಾಜಿ ಡಿಸಿಎಂ ಆರ್. ಅಶೋಕ್ ಟೀಕೆ

24/06/2023, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರದ್ದು ಒಂದು ರೀತಿ ಅತಿರೇಕದ ನಡೆ.ಅವರು ಸಿಎಂ ಅಲ್ಲ, ಆದರೆ ಆ್ಯಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ, ಬಿಜೆಪಿ ನಾಯಕ ಆರ್. ಅಶೋಕ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ತನಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ. ಅದಕ್ಕಾಗಿ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರಕಾರ ಬಿದ್ದು ಹೋಗುತ್ತದೆ ಎಂದರು.
ಇದೇನು ಸಮ್ಮಿಶ್ರ ಸರ್ಕಾರವಾ? ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದು ಅವರು ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದು ಎನ್ನುವುದು ಜಗಜ್ಜಾಹೀರು ಎಙದು ಅವರು ನುಡಿದರು.
ಸಿಎಂ ಆದವರು ಹಿಂದಿನ ಸಿಎಂರನ್ನ ಭೇಟಿ ಮಾಡೋದು ಮಾಮೂಲಿ. ನಾನು ಕೂಡ ಡಿಸಿಎಂ ಆಗಿದ್ದೆ, ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ. 3ನೇ ತಾರೀಖು ಪ್ರತಿಪಕ್ಷ ನಾಯಕನನ್ನ ಅನೌನ್ಸ್ ಮಾಡುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು