4:00 AM Thursday4 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಬದಲಾವಣೆ ಸಾಧ್ಯತೆ ಕಡಿಮೆ: ಮಾಜಿ ಡಿಸಿಎಂ ಆರ್. ಅಶೋಕ್

24/06/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ. ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ ತೀರಾ ಕಡಿಮೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ಬಗ್ಗೆ ನನಗೇನೂ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ಸದ್ಯಕ್ಕೆ ಕಟೀಲ್ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಪಾರ್ಲಿಮೆಂಟ್ ಚುನಾವಣೆ ಇದೆ. ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ ಎಂದರು.
ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಬಳ್ಳಾರಿಯಲ್ಲಿ ಕಟೀಲ್ ರಾಜೀನಾಮೆ ನೀಡಿದ್ದೇನೆ ಎಂಬ ಹೇಳಿಕೆ ನೀಡಿದ್ದಾರೆ ಎಂಬ ಕುರಿತು ಮಾಧ್ಯಮ ಮಂದಿಯ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಬಳಿ ಯಾವ ಮಾಹಿತಿ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಡೆಲ್ಲಿಯವರು ಅಂಗೀಕಾರ ಮಾಡಬೇಕಲ್ವಾ. ಪಾರ್ಲಿಮೆಂಟ್ ಚುನಾವಣೆ ಇದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಆರ್. ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು