9:46 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ: ಜಾಗೃತಿ ಕಾರ್ಯಕ್ರಮ

27/06/2023, 11:21

ಮಂಗಳೂರು(reporterkarnataka.com): ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ವತಿಯಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಎಚ್.ಜಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯುಚ್ಛಕ್ತಿ ನಮಗೆ ದಿನಬಳಕೆಯಲ್ಲಿ ಅತ್ಯಂತ ಪ್ರಮುಖವಾಗಿದ್ದು, ವಿದ್ಯುತ್ ಇರದೇ ಜೀವನ ಊಹಿಸಿಕೊಳ್ಳಲು ಅಸಾಧ್ಯವಾದಂತಾಗಿದೆ. ಆದರೆ ಅದರ ಜತೆಗೆ ವಿದ್ಯುತ್ ಪರಿಕರಗಳ ಉಪಯೋಗದ ಸಂದರ್ಭಗಳಲ್ಲಿ ಜಾಗರೂಕತೆ ವಹಿಸುವುದು ಮುಖ್ಯವಾಗಿದೆ. ಜಿಲ್ಲೆಯಲ್ಲಿ ಹಲವಾರು ಮಂದಿ ವಿದ್ಯುತ್ ಅಪಘಾತಗಳ ಮೂಲಕ ಪ್ರಾಣ ಕಳೆದುಕೊಂಡಿದ್ದು ಮಾತ್ರವಲ್ಲದೆ ಹಲವು ಮಂದಿ ಅಂಗವಿಕಲತೆಗೂ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯುತ್ ಬಳಕೆ ಸಂದರ್ಭ ಸುರಕ್ಷತೆ ಬಹಳ ಅಗತ್ಯವಾಗಿದೆ ಎಂದರು.


ಕಾಲೇಜ್ ಪ್ರಿನ್ಸಿಪಾಲ್ ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದ್ದರು. ಮೆಸ್ಕಾಂ ಚೀಫ್ ಎಂಜಿನಿಯರ್ ಪುಷ್ಪಾ ಎಸ್.ಎ., ಸೂಪರಿಂಟೆಂಡಿಂಗ್ ಎಂಜಿನಿಯರ್ ಕೃಷ್ಣರಾಜ್ ಕೆ.ಶಾಂತಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಲೋಹಿತ್ ಬಿ.ಎಸ್. ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕದ್ರಿ ವಿಭಾಗದ ಕಿರಿಯ ಇಂಜಿನಿಯರ್ ಸುಬ್ರಮಣ್ಯ.ಪಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚಂದ್ರಶೇಖರ ಪೂಜಾರಿ ಸ್ವಾಗತಿಸಿದರು.ಮೆಸ್ಕಾಂ ಪಿ ಆರ್. ಓ. ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಸಹಾಯಕ ಅಭಿಯಂತರ ಮುಬಿನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು