11:38 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು