ಇತ್ತೀಚಿನ ಸುದ್ದಿ
ಬೆಳ್ಳಂಬೆಳಗೆ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಅಧಿಕಾರಿಯ ಮನೆ, ಕಚೇರಿ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ
28/06/2023, 10:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಅವರ ಮನೆ, ಕಚೇರಿ, ಪೆಟ್ರೋಲ್ ಬಂಕ್ ಹಾಗೂ ನಿರ್ಮಾಣ ಹಂತದಲ್ಲಿರುವ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಸಂಪಾದನೆಯ ದೂರಿನ ಮೇಲೆ ಗಂಗಾಧರ್ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಏಕಕಾಲದಲ್ಲಿ ಗಂಗಾಧರ್ ಅವರ ಜಯನಗರ ಬಡಾವಣೆಯಲ್ಲಿರುವ
ಮನೆ,ರಾಮನಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆದಿದೆ.
ಗಂಗಾಧರ್ ಅವರು ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಏಕಕಾಲದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ತಿರುಮಲೇಶ್ ನೇತೃತ್ವವ ವಹಿಸಿದ್ದರು.