2:52 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ನಿರಂತರ ದೈಹಿಕ ಸಂಪರ್ಕ: ಆರೋಪಿ ಸೆರೆ; ನ್ಯಾಯಾಂಗ ಬಂಧನ

29/06/2023, 19:03

ಮಂಗಳೂರು(reporterkarnataka.com): ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿದಂತೆ ಕಡಬ ಮೂಲದ ಯುವಕನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು 24ರ ಹರೆಯದ ಸಂತ್ರಸ್ತ ಯುವತಿ ಜೂನ್ 26ರಂದು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನು ಇನ್ ಸ್ಟಾಗ್ರಾಂ ಮುಖಾಂತರ ಪರಿಚಯವಾಗಿ ಬಳಿಕ ಪರಸ್ಪರ ಪ್ರೀತಿಸುತ್ತಿದ್ದು, ಆರೋಪಿತನು ಸಂತ್ರಸ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೇ 28ರಂದು ಮಂಗಳೂರಿನ ಹೊಟೇಲ್ ಗೆ ಕರೆದುಕೊಂಡು ಹೋಗಿ ರೂಮ್ ಪಡೆದುಕೊಂಡು
ಸುಮಾರು 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ಆತ ಈ ಹಿಂದೆ ಮದುವೆಯಾಗಿರುವ ವಿಚಾರ ತಿಳಿದು ಬಂತು ಎಂದು ಮಹಿಳಾ ಠಾಣೆಗೆ ನೀಡಿದ ದೂರಿನಲ್ಲಿ ಯುವತಿ ತಿಳಿಸಿದ್ದಾಳೆ.
ಆರೋಪಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ. 52/2023 ಕಲಂ 417, 376, 506 ಐಪಿಸಿ ಯಂತೆ ಕೇಸು ದಾಖಲಾಗಿದೆ.
ಆರೋಪಿ ಅನೀಶ್ ರೆಹಮಾನ್ ನನ್ನು ಮಂಗಳೂರು ನಗರದಲ್ಲಿ ದಸ್ತಗಿರಿ ಮಾಡಿ ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ: 40/2023 ಕಲಂ 27 ಬಿ ಎನ್.ಡಿ.ಪಿ.ಎಸ್. ಆ್ಯಕ್ಸ್ ನಂತೆ ಕೂಡಾ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕ ಲೋಕೇಶ್ ಎ.ಸಿ. ಅವರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು