10:28 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲಾದ್ಯಂತ ತ್ಯಾಗ, ಬಲಿದಾನದ ಹಬ್ಬ ಬಕ್ರೀದ್ ಆಚರಣೆ: ಸಾಮೂಹಿಕ ಪ್ರಾರ್ಥನೆ

29/06/2023, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗುರುವಾರ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಣಕಲ್, ಕೊಟ್ಟಿಗೆಹಾರ, ಚಕ್ಕಮಕ್ಕಿ,ಗಬ್ಗಲ್ ಸೇರಿದಂತೆ ಹಲವೆಡೆ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ತ್ಯಾಗ ಬಲಿದಾನದ ಹಬ್ಬದ ಶುಭಾಶಯ ಕೋರಿದರು.


ಕೊಟ್ಟಿಗೆಹಾರದ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಧರ್ಮಗುರು ಅಬ್ದುಲ್ ರೆಹಮಾನ್ ಫೈಝಿ ಮಾತನಾಡಿ’ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಕುರಿ ಬಲಿದಾನ ನೀಡಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ದಾನ ಮಾಡುವ ಮೂಲಕ ಹಾಗೂ ಅಲ್ಲಾಹುಗೆ ಬಲಿದಾನ ನೀಡಿದ ಮಾಂಸವನ್ನು ಮೂರು ಪಾಲು ಮಾಡಿ ಒಂದು ಪಾಲು ತಾವು ಬಳಸಿ ಉಳಿದುದನ್ನು ಬಡವರಿಗೆ ಹಂಚಬೇಕು.ಇದರಿಂದ ಈ ಹಬ್ಬ ಭೇಧಬಾವ ಹೊಂದದೇ ಸಮಾನತೆಯಿಂದ ಹಬ್ಬ ಆಚರಿಸಲಾಗುತ್ತದೆ’ ಎಂದರು. ಅಧ್ಯಕ್ಷ ಮುನೀರ್, ಹಾಜಿ ಟಿ.ಎ.ಖಾದರ್,ಸಿದ್ದಿಕ್, ಹಾಜಿ ಯಾಕೂಬ್,ತನುಕೊಟ್ಟಿಗೆಹಾರ,ಮೊಯಿದ್ದೀನ್, ಮತ್ತಿತರರು ಭಾಗವಹಿಸಿದ್ದರು. ವಿಶೇಷ ಪ್ರಾರ್ಥನೆಯ ಬಳಿಕ ಮುಸ್ಲಿಂ ಬಾಂದವರು ಖಬರ್ ಸ್ತಾನಕ್ಕೆ ತೆರಳಿ ಅಗಲಿದ ಕುಟುಂಬದ ಸದಸ್ಯರಿಗಾಗಿ ವಿಶೇಷವಾಗಿ ಮುಕ್ತಿ ಸಿಗಲೆಂದು ಪ್ರಾರ್ಥಿಸಿದರು. ಕೊಟ್ಟಿಗೆಹಾರ ಸುತ್ತಮುತ್ತಲಿನ ಮುಸ್ಲಿಂ ಭಾಂದವರು ಮಸೀದಿಯಲ್ಲಿ ಸೇರಿದ್ದರು. ಬಣಕಲ್ ಜುಮ್ಮಾ ಮಸೀದಿಯಲ್ಲಿ ದರ್ಮಗುರು ಆರೀಸ್ ಮಾತನಾಡಿ ‘ಬಕ್ರೀದ್ ಹಬ್ಬವು ಸಮಾನತೆಯ ಹಬ್ಬವಾಗಿದ್ದು ಬಡವ ಬಲ್ಲಿದ ಎಂಬ ತಾರತಮ್ಯವಿಲ್ಲದೇ ತಾವೆಲ್ಲರೂ ಒಂದೇ ಎಂಬ ಭಾವೈಕ್ಯತೆಯಿಂದ ಹಬ್ಬ ಆಚರಿಸಲಾಗುತ್ತದೆ.ಬಡವರಿಗೆ ದಾನ ಮಾಡುವುದೇ ಈ ಹಬ್ಬದ ಮೂಲ ಉದ್ದೇಶವಾಗಿದೆ’ ಎಂದರು. ಹಲವು ಮಸೀದಿಗಳಲ್ಲಿ ಕುರಾನ್ ಪಠಿಸಿ ವಿಶೇಷವಾಗಿ ಪ್ರಾರ್ಥಿಸಿದರು. ಬಣಕಲ್ ಸುತ್ತಮುತ್ತ ಮಸೀದಿಗಳಲ್ಲೂ ನಮಾಜ್ ಮಾಡಿ ಪರಸ್ಪರ ಹಬ್ಬದ ಶುಭಾಶಯ ಕೋರಿದರು.ಕೊಟ್ಟಿಗೆಹಾರ,ಗಬ್ಗಲ್, ಬಣಕಲ್, ಬಗ್ಗಸಗೋಡು,ಬೆಟ್ಟಗೆರೆ ಹಳಿಕೆ ಮಸೀದಿಗಳಲ್ಲೂ ಮುಸ್ಲಿಂ ಮಕ್ಕಳು ಹಾಗೂ ಹಿರಿಯರು ಹೊಸ ಬಟ್ಟೆ ತೊಟ್ಟು ಮಸೀದಿಯಲ್ಲಿ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ತೊಡಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು