10:33 AM Saturday18 - January 2025
ಬ್ರೇಕಿಂಗ್ ನ್ಯೂಸ್
ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ…

ಇತ್ತೀಚಿನ ಸುದ್ದಿ

ಮಂಗಳೂರು: ಸ್ಥಗಿತಗೊಂಡ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ

30/06/2023, 14:15

ಮಂಗಳೂರು(reporterkarnataka.com): ಸ್ಥಗಿತಗೊಂಡ ಸರಕಾರಿ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಗಳನ್ನು ಒದಗಿಸಲು ಆಗ್ರಹಿಸಿ ಹಾಗೂ ಮಂಗಳೂರು – ಮೂಡಬಿದ್ರಿ- ಕಾರ್ಕಳ ಮತ್ತು ಮಂಗಳೂರು- ಉಡುಪಿ ನಡುವೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ನಗರದಲ್ಲಿ ಇಂದು ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ನಗರದ ಕ್ಲಾಕ್ ಟವರ್ ಬಳಿಯಲ್ಲಿ ಸೇರಿದ್ದ ಮಹಿಳಾ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಬೇಡಿಕೆಗಳ ಬಗ್ಗೆ ಜನತೆಯ ಗಮನ ಸೆಳೆದರು.

ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಯಂತಿ ಬಿ ಶೆಟ್ಟಿಯವರು, ಕರ್ನಾಟಕ ರಾಜ್ಯಾದ್ಯಂತ ಸರಕಾರಿ ಕೆಎಸ್ಸಾರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಸರಕಾರಿ ಕೆಎಸ್ಆರ್ಟಿಸಿ ಬಸ್ ಗಳು ಕೊರೋನಾ ಕಾಲದ ನಂತರ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದ ಕಾರಣ ಸೇವೆಯಲ್ಲಿ ಬಹಳಷ್ಟು ವ್ಯತ್ಯಯ ಕಂಡು ಪ್ರಯಾಣಿಕರು ಬಹಳಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಮಾತ್ರವಲ್ಲ ಈಗ ಮಹಿಳೆಯರು ಸರಕಾರದ ಈ ಸೌಲಭ್ಯದಿಂದಲೂ ವಂಚಿತರಾಗುತ್ತಿದ್ದಾರೆ. ನರ್ಮ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 68 ರಷ್ಟು ಸರಕಾರಿ ಕೆಎಸ್ಸಾರ್ಟಿಸಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ ಮಂಜೂರಾದ 68 ಬಸ್ಸುಗಳಲ್ಲಿ 18 ಬಸ್ಸು ನಗರದ ಸ್ಟೇಟ್ ಬ್ಯಾಂಕ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್ಸು ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಸಾರಿಗೆ ಪ್ರಾಧಿಕಾರ ಒಪ್ಪಿಗೆ‌ ನೀಡಿದ್ದವು. ಆ ಸಂದರ್ಭ ಖಾಸಗೀ ಬಸ್ ಮಾಲಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದ್ದರು. ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥ ಪಡಿಸಲು ನಿರ್ದೇಶನ ನೀಡಿತ್ತು ಎಂದು ಹೇಳಿದರು.


ಜನವಾದಿ ಮಹಿಳಾ ಸಂಘಟನೆಯ ಹಿರಿಯ ಮುಖಂಡರಾದ ಪದ್ಮಾವತಿ ಶೆಟ್ಟಿಯವರು ಮಾತನಾಡುತ್ತಾ, ಜಿಲ್ಲೆಯಲ್ಲಿ ಖಾಸಗೀ ಬಸ್ಸುಗಳ ಭರಾಟೆಯ ನಡುವೆ ಸರಕಾರಿ ಬಸ್ಸುಗಳು ಮೂಲೆಗುಂಪಾಗತೊಡಗಿದೆ. ಇದರಿಂದಾಗಿ ಬಹುತೇಕ ಕಡಿಮೆ ಆದಾಯಕ್ಕೆ ದುಡಿಯುವ ಜನ ಸಾಮಾನ್ಯರು ಸಮಸ್ಯೆಯನ್ನು ಅನುಭವಿಸುವಂತಾಗಿದೆ. ಜೂನ್ 11 ರಿಂದ ಸರಕಾರ ಫೋಷಿಸಿದ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಸದ್ಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು ಅಂತಹ ಮಹಿಳೆಯರಿಗೆ ಸರಕಾರದ ಈ ಯೋಜನೆಯು ಭಾರೀ ಅನುಕೂಲಕರವಾಗಲಿದೆ. ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತಿ ಬೋಳಾರರವರು, ದ.ಕ. ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಸರಕಾರಿ ನಗರ ಸಾರಿಗೆ ನರ್ಮ್ ಬಸ್ ಗಳು ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಮತ್ತು ಜನರ ಬೇಡಿಕೆಯ ಅನುಗುಣವಾಗಿ ಮಂಜೂರಾಗದೆ ಬಾಕಿ ಇರುವ ಪ್ರದೇಶಗಳಿಗೂ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲೆಯಾದ್ಯಂತ ಪ್ರಬಲ ಜನಾಂದೋಲನವನ್ನು ನಡೆಸಲು ಜನವಾದಿ ಮಹಿಳಾ ಸಂಘಟನೆ ಸಜ್ಜಾಗಿದೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಬೀಡಿ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷರಾದ ವಸಂತ ಆಚಾರಿಯವರು ಮಾತನಾಡಿ ಮಹಿಳಾ ಪರವಾದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸಾರಿದರು.
ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ನಾಯಕರಾದ ವಿಲಾಸಿನಿ ತೊಕ್ಕೊಟ್ಟು,ಜಯಲಕ್ಷ್ಮಿ, ಪ್ರಮೀಳಾ ಶಕ್ತಿನಗರ, ಭವ್ಯ, ರಶ್ಮಿ,ಲೀಲಾ ಜೆ,ದೀಕ್ಷಿತ ಜಲ್ಲಿಗುಡ್ಡ,ಪ್ರಮೀಳ ದೇವಾಡಿಗ, ಸಿಐಟಿಯು ಜಿಲ್ಲಾ ನಾಯಕರಾದ ಸುನಿಲ್ ಕುಮಾರ್ ಬಜಾಲ್,ಯೋಗೀಶ್ ಜಪ್ಪಿನಮೋಗರು,ಸುಂದರ ಕುಂಪಲ,ನಾರಾಯಣ ತಲಪಾಡಿ,ದಯಾನಂದ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು