5:58 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ಬಿಎಸ್ ವೈ ಬಣ ಮತ್ತೆ ಮೇಲುಗೈ ಸಾಧಿಸುತ್ತಾ?: ಪುತ್ರನಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುತ್ತಾ?; ಬೊಮ್ಮಾಯಿ ಪ್ರತಿಪಕ್ಷ ನಾಯಕರಾಗುತ್ತಾರಾ?

01/07/2023, 22:42

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಗ್ಗೆ ಪರಾಮರ್ಶೆಗೆ ಹೊರಟ ರಾಜ್ಯ ಬಿಜೆಪಿ ನಾಯಕರುಗಳು ಪರಸ್ಪರ ಗುದ್ದಾಟದಲ್ಲಿ ತೊಡಗಿರುವುದು ಎಲ್ಲರಿಗೆ ತಿಳಿದ ವಿಚಾರ. ಈ ನಡುವೆ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಕಾರ್ಯತಂತ್ರ ರೂಪಿಸಲು ಸಿದ್ಧತೆ ನಡೆಸಿದೆ. ಹೈಕಮಾಂಡ್ ಹೊಸ ಸೂತ್ರದ ಪ್ರಕಾರ ಬಿ.ಎಸ್. ಯಡಿಯೂರಪ್ಪ ಬಣ ಮತ್ತೆ ಮೇಲುಗೈ ಪಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭಿಸಿದೆ.
ಯಡಿಯೂರಪ್ಪ ಅವರು ಪಕ್ಷದಿಂದ ದೂರ ಸರಿದಾಗಲೆಲ್ಲ ಕರ್ನಾಟಕದಲ್ಲಿ ಬಿಜೆಪಿ ಹೀನಾಯ
ಸೋಲು ಅನುಭವಿಸಿರುವುದನ್ನು ಬಿಜೆಪಿ ಹೈಕಮಾಂಡ್ ಈಗಾಗಲೇ ಮನಗಂಡಿದೆ. 2013ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಯಡಿಯೂರಪ್ಪ ಅವರು ಕೆಜೆಪಿ ಸ್ಥಾಪಿಸಿರುವುದರಿಂದ ಕೇಸರಿ ಪಡೆ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿತ್ತು. 2023ರ ವಿಧಾನ ಸಭೆ ಚುನಾವಣೆಗೆ ಮುನ್ನ ವಯಸ್ಸಿನ ಕಾರಣ ನೀಡಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿ ಅವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿದ ಪರಿಣಾಮವನ್ನು ಮೊನ್ನೆ ಮೊನ್ನೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದೆ. ಇವೆಲ್ಲವನ್ನು ಮನಗಂಡಿರುವ ಪಕ್ಷದ ಹೈಕಮಾಂಡ್ ಯಡಿಯೂರಪ್ಪ ಅವರ ಬಣಕ್ಕೆ ಮತ್ತೆ ಮಣೆ ಹಾಕುವ ಕುರಿತು ಚಿಂತನೆ ನಡೆಸಿದೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭಿಸಿದೆ. ಸದ್ಯದಲ್ಲೇ
ಲೋಕಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಕೂಡ ನಡೆಯಲಿದೆ. ಈ ಸರ್ಜರಿಯಲ್ಲಿ ಕರ್ನಾಟಕಕ್ಕೆ ಸೇರಿದ 2-3 ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಸಚಿವರಾದ ನಾರಾಯಣ ಸ್ವಾಮಿ, ಖೂಬಾ ಅವರನ್ನು ಕೈಬಿಡುವುದು ಬಹುತೇಕ ಖಚಿತವಾಗಿದೆ. ಅಗತ್ಯ ಬಿದ್ದರೆ ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಶೋಭಾ ಕರಂದ್ಲಾಜೆ ಅವರನ್ನು ಬದಲಾಯಿಸುವ ಚಿಂತನೆಯೂ ನಡೆದಿದೆ ಎನ್ನಲಾಗಿದೆ. ನಾರಾಯಣ ಸ್ವಾಮಿ ಮತ್ತು ಖೂಬಾ ಅವರಿಂದ ಪಕ್ಷದ ಸಂಘಟನೆಯ ವಿಷಯದಲ್ಲಿ ಬಿಜೆಪಿಗೆ ಯಾವುದೇ ಲಾಭವಾಗಿಲ್ಲ. ಅದೇ ರೀತಿ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರತಿನಿಧಿಸುವ ಸಂಸತ್ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಎಲ್ಲ ಕ್ಷೇತ್ರಗಳನ್ನು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ, ಚಿಕ್ಕಮಗಳೂರು ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಅನುಭವಿಸಿದೆ. ಇದರ ಪರಿಣಾಮ ಶೋಭಾ ಕೆಂದ್ಲಾಜೆ ಅವರ ಮಂತ್ರಿ ಸ್ಥಾನ ಕೈತಪ್ಪಿ ಹೋದರೂ ಆಶ್ಚರ್ಯಪಡಬೇಕಾಗಿಲ್ಲ. ಹಾಗೆ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ. ಇಷ್ಟೇ ಅಲ್ಲದೆ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೂ ಯಡಿಯೂರಪ್ಪ ಬಣದ ನಾಯಕನನ್ನೇ ಆಯ್ಕೆ ಮಾಡುವ ಸಂಭವವಿದೆ. ಪ್ರತಿಪಕ್ಷದ ನಾಯಕ ಸ್ಥಾನದ ರೇಸ್ ನಿಂದ ಇದುವರೆಗೆ ಹೊರಗುಳಿದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಅವರ ಆಪ್ತರಾದ ಬಸವರಾಜ ಬೊಮ್ಮಾಯಿ ಅವರನ್ನು ನೇಮಿಸುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಸ್. ಸಂತೋಷ್ ಬಣಕ್ಕೆ ಹಿನ್ನಡೆಯಾಗಿ ಮತ್ತೆ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದಂತಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು