ಇತ್ತೀಚಿನ ಸುದ್ದಿ
ಮೋದಿ ಸರಕಾರಕ್ಕೆ 9 ವರ್ಷ: ಬಿಜೆಪಿ ಹಿರಿಯ ಕಾರ್ಯಕರ್ತರ ಜತೆ ಶಾಸಕ ಡಾ. ಭರತ್ ಶೆಟ್ಟಿ ಸಂವಾದ
02/07/2023, 11:11

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲದಿಂದ ಹಿರಿಯ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಪದವಿನಂಗಡಿಯ ಬೆನಕ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಜಯಾನಂದ ಅಂಚನ್, ಹಿರಿಯ ನಾಗರಿಕ ಪ್ರಕೋಷ್ಠದ ಸಂಚಾಲಕ ರಮೇಶ್ ಕುಡುಪು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.