ಇತ್ತೀಚಿನ ಸುದ್ದಿ
ಅಕ್ರಮ ಮರಳುಗಾರಿಕೆ ತಾಣಕ್ಕೆ ಹಠಾತ್ ಪೊಲೀಸ್ ದಾಳಿ: 25 ಟ್ರಾಕ್ಟರ್, 4 ಜೆಸಿಬಿ ವಶ
03/07/2023, 11:05

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಥಣಿ ಪೊಲೀಸ್ ಠಾಣೆ ವ್ತಾಪ್ತಿಯ ಮಹಿಷವಾಡಗಿ ಗ್ರಾಮದ ಕೃಷ್ಣಾ ನದಿ ಪಾತ್ರಕ್ಕೆ ದಾಳಿ ನಡೆಸಿದ ಪೊಲೀಸರು 25 ಟ್ರಾಕ್ಟರ್, 4 ಜೆಸಿಬಿ 1 ಹೈವಾ ವಾಹನ ವಶಪಡಿಸಿಕೊಂಡಿದ್ದಾರೆ.
ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಯ ಮೇಲೆ ಅಥಣಿ ಪೊಲೀಸರು ಹಠಾತ್ತನೆ ದಾಳಿ ನಡೆದಿದ್ದಾರೆ. ಈ ಸಂದರ್ಭದಲ್ಲಿ ಮರಳುಗಾರಿಕೆಗೆ ಬಳಸುತ್ತಿದ್ದ
25 ಟ್ರಾಕರ್, 4 ಜೆಸಿಬಿ 1 ಹೈವಾ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಿಷವಾಡಗಿ ಗ್ರಾಮದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿತ್ತು. ಅಥಣಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.
ಡಿವೈಎಸ್ಪಿ ಶ್ರೀಪಾದ ಜಲ್ದೇ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 3 ಜನ ಪಿಎಸ್ಐ ಒರ್ವ ಸಿಪಿಪಿ 20ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.