9:18 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬಂಟ್ವಾಳ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಘಟಕ ಪದಗ್ರಹಣ

03/07/2023, 11:26

ಬಂಟ್ವಾಳ(reporterkarnataka.com): ಬಂಟ್ವಾಳ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಘಟಕದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಫ್ರೊ. ವರ್ಗಿಸ್ ವೈದ್ಯನ್ ಉಪಸ್ಥಿತಿಯಲ್ಲಿ ನರೆವೇರಿತು.
ಹಿರಿಯ ಜೇಸಿಗಳು ತಮ್ಮ ಅನುಭವ ಮತ್ತು ನಾಯಕತ್ವದ ಗುಣಗಳನ್ನು ಸಮಾಜ ಸೇವೆಗೆ ಬಳಸಿಕೊಳ್ಳಬೇಕು. ಪರಿಸರ ಸಂರಕ್ಷಣೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಭಾವೈಕ್ಯಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ಸಲಹೆ ನೀಡಿದರು.

ರಾಷ್ಟ್ರೀಯ ಉಪಾಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಸದಸ್ಯರು ಸಕ್ರಿಯವಾಗಿ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಿ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ರೊ.ಕ್ಲಬ್‍ನ ಅಧ್ಯಕ್ಷ ಪುಷ್ಪರಾಜ್ ಹೆಡ್ಗೆ, ಬ್ರೈಟ್ ಕನ್ಟ್ರಕ್ಷನ್‍ನ ಅಬ್ದುಲ್ ಜಲೀಲ್ ಮೋಂಟುಗೊಳಿ, ವಾಲಿಬಾಲ್ ಎಸೋಸಿಯೇಶನ್ ಜಿಲ್ಲಾ ಅಧ್ಯಕ್ಷ ಬಿ.ಎಸ್. ಸತೀಶ್ ಕುಮಾರ್ ಪುತ್ತೂರು ಶುಭ ಹಾರೈಸಿ ಮಾತನಾಡಿದರು.
ಅಧ್ಯಕ್ಷರಾಗಿ ಡಾ. ಆನಂದ ಬಂಜನ್ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಕಾರ್ಯದರ್ಶಿ ನ್ಯಾಯವಾದಿ ಶೈಲಜಾ ರಾಜೇಶ್ , ಕೋಶಾಧಿಕಾರಿ ಸತ್ಯನಾರಾಯಣ ರಾವ್, ಜೊತೆ ಕಾರ್ಯದರ್ಶಿ ಮಲ್ಲಿಕಾ ಆಳ್ವ ಅಧಿಕಾರ ವಹಿಸಿಕೊಂಡರು.
ಉಪಾಧ್ಯಕ್ಷರಾದ ಆದಿರಾಜ ಜೈನ್, ಡಾ. ಮನೋಹರ ರೈ , ನಿರ್ದೇಶಕರಾದ ಪಿ . ಎ. ರಹೀಂ , ಪಿ. ಮಹಮ್ಮದ್ , ನಾಗೇಶ್ ಬಾಳೆಹಿತ್ಲು, ರವೀಂದ್ರ ಕುಕ್ಕಾಜೆ , ಉಮೇಶ್ ಕುಮಾರ್ ವೈ, ಹರಿಶ್ಚಂದ್ರ ಆಳ್ವ , ತಾರನಾಥ ಕೊಟ್ಟಾರಿ , ಜಯಗಣೇಶ, ಸದಾಶಿವ ಡಿ ತುಂಬೆ, ಯೋಗೀಶ್ ಬಂಗೇರ , ಪಿ.ಮೊಹಮ್ಮದ್, ಶುಭಾ ಬಂಜನ್, ಸುಜಾತ ಉಪಸ್ಥಿತರಿದ್ದರು.
ಬಂಟ್ವಾಳ ಲೀಜನ್‍ನ ಸ್ಥಾಪಕ ಅಧ್ಯಕ್ಷ ಜಯಾನಂದ ಪೆರಾಜೆ ಅಧ್ಯಕ್ಷತೆ ವಹಿಸಿ ಪ್ರಮಾಣ ವಚನ ಬೋಧಿಸಿದರು. ಹಿರಿಯ ಜೇಸಿ ಗಳಾದ ಬಿ. ರಾಮಚಂದ್ರ ರಾವ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಹಮ್ಮದ್ ಮುಸ್ತಾಫ ಸ್ವಾಗತಿಸಿದರು. ಸತ್ಯನಾರಾಯಣ ರಾವ್ ವರದಿ ಮಂಡಿಸಿದರು. ಕಾರ್ಯದರ್ಶಿ ನ್ಯಾಯವಾದಿ ಶೈಲಜಾ ರಾಜೇಶ್ ವಂದಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು