8:28 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಬಿ.ಕೆ. ಹರಿಪ್ರಸಾದ್ ಗೆ ಸೂಕ್ತ ಸ್ಥಾನಮಾನ ನೀಡಿ; ಬಿಲ್ಲವರ ಕಡೆಗಣಿಸಿದರೆ ಸ್ವತಂತ್ರ ಪಕ್ಷ ರಚನೆ: ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ

03/07/2023, 20:12

ಬಂಟ್ವಾಳ(reporterarnataka.com):ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಹುನ್ನಾರ ಕಾಂಗ್ರೆಸ್ ನಲ್ಲಿ ನಡೆಯುತ್ತಿದ್ದು, ಅವರಿಗೆ ತಕ್ಷಣ ಸೂಕ್ತ ಸ್ಥಾನಮಾನ ನೀಡಬೇಕು. ಬಿಲ್ಲವರ ಕಡೆಗಣಿಸುವುದು ಮುಂದುವರಿದರೆ ಸ್ವತಂತ್ರ ಪಕ್ಷ ರಚಿಸಲಾಗುವುದು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದರು.

ಮೆಲ್ಕಾರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರಿಗೆ ತಕ್ಷಣವೇ ಸೂಕ್ತ ಸ್ಥಾನಮಾನ ನೀಡಬೇಕು. ಇಲ್ಲದೇ ಇದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಲ್ಲವ ಸಮಾಜ ಹರಿಪ್ರಸಾದ್ ಅವರ ಬೆಂಬಲಕ್ಕೆ ನಿಲ್ಲಲಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಿಬೇಕು, ಇಲ್ಲದೇ ಹೋದಲ್ಲಿ ಸಮುದಾಯ ಬೀದಿಗಿಳಿಯುವುದು ನಿಶ್ವಿತ ಎಂದು ಸ್ವಾಮೀಜಿ ನುಡಿದರು.
ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ 250 ಕೋಟಿ ರೂಪಾಯಿ ಅನುದಾನ ನೀಡಬೇಕು, ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಾಣ ಮಾಡಬೇಕು, ಬಿಲ್ಲವರು ಹಾಗೂ ಈಡಿಗರ ಕುಲ ಕುಸಬು ಆಗಿರುವ ನೀರಾ ಹಾಗೂ ಸೇಂದಿ ಇಳಿಸುವ ಕಾಯಕಕ್ಕೆ ಸರಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಬಿಲ್ಲವರ ಕುಲಶಾಸ್ತ್ರೀಯ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾಲಯದ ನಾರಾಯಣ ಗುರು ಅಧ್ಯಯನ ಪೀಠಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.
ಮಂಗಳೂರಿನಲ್ಲಿ 9 ಲಕ್ಷ, ಉಡುಪಿಯಲ್ಲಿ 3 ಲಕ್ಷ , ಕಾರವಾರದಲ್ಲಿ 5 ಲಕ್ಷ, ಶಿವಮೊಗ್ಗ ಜಿಲ್ಲೆಯಲ್ಲಿ 5 ಲಕ್ಷ ಬಿಲ್ಲವರು, ಈಡಿಗರು, ನಾಮಧಾರಿಗಳು, ದೀವರು ಇದ್ದರೂ, ಇಲ್ಲಿರುವ 22 ಮತ ಕ್ಷೇತ್ರಗಳಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರನ್ನು ಕಡೆಗಣಿಸಲಾಗಿದೆ. ಇದೇ ರೀತಿ ಕಡೆಗಣಿಸಿದ್ದಲ್ಲಿ ಸ್ವತಂತ್ರ ಪಕ್ಷ ಸ್ಥಾಪಿಸಲು ಬಿಲ್ಲವ ಸಮುದಾಯ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಾಮಂಡಳಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ, ಜಿಲ್ಲಾ ಗೌರವಾಧ್ಯಕ್ಷ ಸಂಜೀವ ಪೂಜಾರಿ, ಜಿಲ್ಲಾ ಅಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಟಿ. ಶಂಕರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು