12:18 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ: ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ರಾಂಕ್ ಪಡೆದ ಜ್ಯೋತಿಗೆ ಉಪನ್ಯಾಸಕರ  ಅಭಿನಂದನೆ   

22/07/2021, 07:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜ್ಯೋತಿ ಚಂದ್ರಮೌಳೇಶ್ವರ ನೂರಕ್ಕೆ ನೂರು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಸುರೇಶ್ ಕೆಂಬವಿಮಠ ತಿಳಿಸಿದ್ದಾರೆ.

ಒಟ್ಟು 30 ವಿದ್ಯಾರ್ಥಿಗಳಿದ್ದು, ಐದು ಅತ್ಯುತ್ತಮ ಶ್ರೇಣಿ ,17 ಪ್ರಥಮ, 7 ದ್ವಿತೀಯ ಮತ್ತು ಒಂದು ಉತ್ತಿರ್ಣ ರಾಗಿದ್ದಾರೆ ಎಂದು ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಅಭಿನಂದಿಸಿದೆ.


Join our WhatsApp group

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ‌‌‌‌‌‌ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ ಒಬ್ಬರು ಉನ್ನತ ಶ್ರೇಣಿ, 5 ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಸಂತೋಷ ಕುಮಾರ ತಂ ವೀರಣ್ಣ ನಾಗರಬೆಂಚಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 554 (92.33) ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. ಅದೇ ರೀತಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 40 ವಿದ್ಯಾರ್ಥಿಗಳಲ್ಲಿ ಇಬ್ಬರು ಉನ್ನತ ಶ್ರೇಣಿ,17 ಪ್ರಥಮ ದರ್ಜೆ, 20 ದ್ವಿತೀಯ ದರ್ಜೆ ,1 ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.

ರವಿಕುಮಾರ ತಂ ರಾಮಣ್ಣ ಚಿಕ್ಕಕಡಬೂರ 600 ಕ್ಕೆ 539(89.33) ಮತ್ತು ಅಜಮಿರ್ ತಂ ಖಾಜಾಸಾಬ ‌600 ಕ್ಕೆ 533 (88.83) ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ಕ್ರಮವಾಗಿ ಕಾಲೇಜಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಪದಾಧಿಕಾರಿಗಳು ,ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದ್ದಾರೆ. ಮಸ್ಕಿಯ ಜಂಗಮ ಸಮಾಜ ಶ್ರೀಮತಿ ಈರಮ್ಮ ಡಾಕ್ಟರ್ ದಯಾನಂದ್ ಹಿರೇಮಠ ಇವರ ಮಗಳು ಕವನ ಹಿರೇಮಠ್ ಪಿಯುಸಿ ಪರೀಕ್ಷೆಯಲ್ಲಿ 99 ಪರ್ಸೆಂಟೇಜ್ 5 94 ಅಂಕ ಪಡೆದು ಸಾಧನೆಗೈದಿದ್ದಾರೆ ಮಸ್ಕಿ ಜಂಗಮ ಸಮಾಜದ ಸಿದ್ದಲಿಂಗಯ್ಯ ಸೊಪ್ಪಿಮಠ ಸೇರಿದಂತೆ ಜಂಗಮ ಮಂಡಳಿ ಸೇರಿದಂತೆ ಮಲ್ಲಿಕಾರ್ಜುನ್ ಸಿಂಧನೂರ್ ಶಾರದಾ ಶಾಲೆ ಮುಖ್ಯೋಪಾಧ್ಯಾಯ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು