ಇತ್ತೀಚಿನ ಸುದ್ದಿ
ವಿದ್ಯಾರ್ಥಿಗಳು ವೈದ್ಯರ ಆದರ್ಶಗಳನ್ನು ಮೈಗೂಡಿಸಿಗೊಳ್ಳಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ.
03/07/2023, 22:44

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ,ಯೂತ್ ರೆಡ್ ಜಂಟಿ ಆಶ್ರಯದಲ್ಲಿ ವೈದ್ಯರ ದಿನಾಚರಣೆಯನ್ನು ಕಾರ್ಮೆಲ್ ಕಾಲೇಜಿನಲ್ಲಿ ನಡೆಸಲಾಯಿತು.
ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಧಿಕಾರಿ ಫಾ. ಸಿಲ್ವಸ್ಟೆರ್ ವಿನ್ಸಟ್, ಕಾರ್ಯಕ್ರಮವನ್ನು ಉದ್ಘಾಟಿಸಿ, ವೈದ್ಯೋ ನಾರಾಯಣೋ ಹರಿ. ವೈದ್ಯರು ಯಾವುದೇ ಆರೋಗ್ಯ ವ್ಯವಸ್ಥೆಯಲ್ಲಿ ಪ್ರಮುಖ ಸದಸ್ಯರಾಗಿರುತ್ತಾರೆ. ನಾವು ವೈದ್ಯರ ಕೊಡುಗೆಗಳನ್ನು ಗೌರವಿಸಬೇಕು ಎಂಬ ಸಂದೇಶ ನೀಡಿದರು.
ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಎ. ಅವರು ಮಾತನಾಡಿ, ದೇಶದಾದ್ಯಂತ ಜೀವ ಉಳಿಸುವ ವೈದ್ಯರ ಪ್ರಯತ್ನಗಳಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರೀಯ ವೈದ್ಯರ ದಿನ ಹೆಚ್ಚು ಮಹತ್ವದ್ದಾಗಿದೆ. ವಿದ್ಯಾರ್ಥಿಗಳಿಗೆ ವೈದ್ಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಿ ಎಂಬ ಸಂದೇಶ ನೀಡಿದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಪ್ರಸುತಿ ತಜ್ಞೆ ಡಾ.ಅಪರ್ಣ ಬಾಳಿಗ ಕೆ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಆರೋಗ್ಯ ಜಾಗೃತಿ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ರಂಜೀನಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವೈದ್ಯೆ ಅಪರ್ಣ.ಕೆ.ಬಾಳಿಗ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್
ಡಾ.ಲತಾ ಫೆರ್ನಾಂಡಿಸ್ ಎಸಿ,ಸ್ವಾಗತಿಸಿದರು. ಜೊಸ್ವಿಟ ವಂದಿಸಿದರು.