ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
04/07/2023, 19:45
ಸಂತೋಷ್ ಅತ್ತಿಗೆರೆ ಚಿಕ್ಕಮಂಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ 3 ದಿನ ಜುಲೈ 5, 6 ಹಾಗೂ 7ರಂದು ಭಾರೀ ಮಳೆಯಾಗಲಿದ್ದು, ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.
ಹವಾಮಾನ ಇಲಾಖೆ115ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ, ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಪೋಷಕರು, ಶಾಲಾ ಮುಖ್ಯಸ್ಥರು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಹಿರಿಯರು ಹೊರಬಾರದು, ಅನಿವಾರ್ಯವಾದಲ್ಲಿ ಮನೆ ಸದಸ್ಯರ ಜೊತೆ ಹೋಗಬೇಕು. ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನ ಪಾಲಿಸುವಂತೆ ಮನವಿ ಮಾಡಲಾಗಿದೆ.