2:52 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಭಾರೀ ಮಳೆ ಮುನ್ಸೂಚನೆ: ದ.ಕ. ಜಿಲ್ಲೆ ರೆಡ್ ಅಲರ್ಟ್ ಘೋಷಣೆ; ನಾಳೆ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ

04/07/2023, 20:51

ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಜುಲೈ 5ರಂದು ರಜೆ ಸಾರಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳಿವು:
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 – 2 4 4 2 5 9 0‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು