ಇತ್ತೀಚಿನ ಸುದ್ದಿ
ಜುಲೈ 8: ಮಂಗಳೂರಿನ ಪದುವಾ ಕಾಲೇಜ್ ಕ್ಯಾಂಪಸ್ ನಲ್ಲಿ ಮೆಗಾ ಉದ್ಯೋಗ ಮೇಳ; 30ಕ್ಕೂ ಹೆಚ್ಚು ಕಂಪನಿಗಳು ಭಾಗಿ
04/07/2023, 23:52
ಮಂಗಳೂರು(reporterkarnataka.com): ನಗರದ ಪದುವಾ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್, ಐಕ್ಯುಎಸಿ, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗವು ಜುಲೈ 8ರಂದು ಮೆಗಾ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ನಂತೂರಿನ ಪಾದುವ ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.
ಬೆಳಗ್ಗೆ 9.00 ರಿಂದ ಸಂಜೆ 4.00 ರವರೆಗೆ ಉದ್ಯೋಗ ಮೇಳವನ್ನು ನಿಗದಿಪಡಿಸಲಾಗಿದೆ. ಮಂಗಳೂರು ಮತ್ತು ಬೆಂಗಳೂರಿನ ಒಟ್ಟು 30 ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ. ಉದ್ಯೋಗಾಕಾಂಕ್ಷಿಗಳಿಗೆ 100+ ಉದ್ಯೋಗಾವಕಾಶಗಳನ್ನು ಒದಗಿಸಲಾಗುವುದು. BA, B.Com, BBA, BCA, MBA, M.Com, ITI, ಡಿಪ್ಲೊಮಾ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಮೆಗಾ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.