11:35 AM Friday17 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅನಾವೃಷ್ಠಿ: ಉತ್ತರ ಕರ್ನಾಟಕದಲ್ಲಿ ಕೈಕೊಟ್ಟ ಮಳೆ; ಶತಕ ದಾಟಿದ ಟೊಮೆಟೊ, ಮೆಣಸಿನ ಕಾಯಿ ಬೆಲೆ!

05/07/2023, 21:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕರಾವಳಿ ಕರ್ನಾಟಕದಲ್ಲಿ ಅತಿವೃಷ್ಠಿಯಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಅನಾವೃಷ್ಠಿ ತಲೆದೋರಿದೆ.
ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಇಲ್ಲಿನ ರೈತರು, ಕೃಷಿಕರು ಮಳೆರಾಯನ ಆಗಮನಕ್ಕಾಗಿ ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ‌. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಹೌದು ಜುಲೈ ತಿಂಗಳ ಮೊದಲ ವಾರ ಕಳೆಯುತ್ತಾ ಬಂದರೂ ಅಥಣಿ ಹಾಗೂ ಕಾಗವಾಡ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ಉಪಯೋಗವಾಗುತ್ತಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ. ಇನ್ನು ಇದಕ್ಕೂ ಮೊದಲು ಬೆಳೆದಿದ್ದ ಟೊಮೆಟೋ, ಮೆಣಸಿನಕಾಯಿ ಸೇರಿ‌ ಇತರೆ ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಬೆಳಗಾವಿಯಲ್ಲಿ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ನೂರು ರೂಪಾಯಿಗೆ ಮಾರಾಟವಾಗುತ್ತಿವೆ.
ಟೊಮೆಟೋ ಮತ್ತು ಮೆಣಸಿನಕಾಯಿ ದಿನನಿತ್ಯ ಎಲ್ಲರ ಮನೆಯಲ್ಲೂ ಬಳಸುವ ಉತ್ಪನ್ನಗಳು. ಆದರೆ ಅಗತ್ಯಕ್ಕಿಂತ ಕಡಿಮೆ ಉತ್ಪನ್ನ ಮಾರುಕಟ್ಟೆಗೆ ಬಂದಿರುವುದರಿಂದ ಇವುಗಳ ಬೆಲೆ ಗಗನಕ್ಕೇರಿವೆ.

ಇತ್ತೀಚಿನ ಸುದ್ದಿ

ಜಾಹೀರಾತು