ಇತ್ತೀಚಿನ ಸುದ್ದಿ
ಬೆಳ್ಮಣ್: ರಸ್ತೆಗೆ ಉರುಳಿದ ಬೃಹತ್ ಮರ; ಬೈಕ್ ಸವಾರ ದಾರುಣ ಸಾವು
07/07/2023, 12:25

ಕಾರ್ಕಳ(reporterkarnataka.com): ಬೆಳ್ಮಣ್ ಪೇಟೆಯಲ್ಲಿ ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿದ ಪರಿಣಾಮ
ಬೈಕ್ ಸವಾರನೊಬ್ಬ ಸಾವನ್ನಪ್ಪಿದ ದಾರುಣ ಘಟನೆ
ನಡೆದಿದೆ.
ಪಿಲಾರು ನಿವಾಸಿ ಪ್ರವೀಣ್( 30) ಮೃತ ದುರ್ದೈವಿ.
ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಕೆಲವು ತಾಸುಗಳ ಕಾಲ ಕಾರ್ಕಳ- ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ಮಾಡಿದರು.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.