11:49 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

5 ಲಕ್ಷ ರೂ.ಲಂಚ ಸ್ವೀಕಾರ: ಬಜಪೆಯ ಖಾಸಗಿ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯುಕ್ತ ಬಲೆಗೆ

07/07/2023, 20:40

ಮಂಗಳೂರು(reporterkarnataka.com): ಲಂಚ ಪಡೆಯುತ್ತಿದ್ದಾಗ ಸರಕಾರಿ ಅಧಿಕಾರಿಗಳು ಸಿಕ್ಕಿ ಬಿದ್ದಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ಇಲ್ಲೊಬ್ಬ ಶಾಲಾ ಸಂಚಾಲಕಿಯೇ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಇದೆಲ್ಲ ನಡೆದಿರುವುದು ನಮ್ಮೂರಿನಲ್ಲಿಯೇ. ಮಂಗಳೂರು ಹೊರವಲಯದ ಬಜಪೆ ಸಮೀಪದ
ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ
ಶಾಲೆಯಲ್ಲಿ ನಿವೃತ್ತಿಯಾಗುತ್ತಿರುವ ಶಿಕ್ಷಕಿ ಶೋಭಾರಾಣಿ ಅವರ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಇಂದು 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಶಾಲಾ ಸಂಚಾಲಕಿಯನ್ನು ಜ್ಯೋತಿ ಪೂಜಾರಿ ಅವರನ್ನು ಬಂಧಿಸಿದ್ದಾರೆ.
ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಜ್ಯೋತಿ ಪೂಜಾರಿ
ಬಂಧನಕ್ಕೀಡಾಗಿದ್ದಾರೆ. ಲೋಕಾಯಯಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್ ಹಾಗೂ ಕಲಾವತಿ, ಇನ್ಸೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು