9:06 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕರ್ನಾಟಕ ಕಂಡ ಶ್ರೇಷ್ಠ ಬಜೆಟ್; ಅಪರೂಪದಲ್ಲಿ ಅಪರೂಪದ ಮುಂಗಡ ಪತ್ರ: ಮಾಜಿ ಸಚಿವ ರಮಾನಾಥ ರೈ

07/07/2023, 23:13

ಬಂಟ್ವಾಳ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ ಸ್ನೇಹಿ, ಯುವ ಸ್ನೇಹಿ, ರೈತ ಸ್ನೇಹಿ ಬಜೆಟ್ ಕೂಡ ಆಗಿರುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ರೈ ನುಡಿದಿದ್ದಾರೆ.

ಬಜೆಟ್ ನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲನ್ನು ನೀಡಲಾಗಿದೆ. ಎಲ್ಲಾ ಇಲಾಖೆಯಗಳಿಗೂ ಎಲ್ಲಾ ಪ್ರದೇಶಗಳಿಗೂ ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಜಿಲ್ಲೆಗಳಿಗೂ ಎಲ್ಲಾ ವರ್ಗಗಳಿಗೂ ಈ ಬಜೆಟ್ ನ್ಯಾಯ ಒದಗಿಸಿದೆ. ಕರಾವಳಿ ಕರ್ನಾಟಕಕ್ಕೂ ಬಜೆಟ್ ನಲ್ಲಿ ಹೆಚ್ಚು ಆಧ್ಯತೆ ನೀಡಲಾಗಿದೆ. ಕರಾವಳಿಯ ಪ್ರವಾಸೋಧ್ಯಮ ಮತ್ತು ಮೀನುಗಾರ ಸಮುದಾಯಕ್ಕೆ ಬಲ ಕೊಟ್ಟಿದೆ. ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ರಚನೆ, ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿ ಮತ್ತು ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಿರುವುದು ಕರಾವಳಿ ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಮುಂದಕ್ಕೆ ಕೊಂಡೊಯ್ಯಲಿದೆ. ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತವಾಗಿ ನೀಡುವ ಸಾಲವನ್ನು 50 ಸಾವಿರ ರೂಪಾಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಅವರ ಬದುಕು ಹಸನಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ನಾರಾಯಣ ಗುರು ವಸತಿ ಶಾಲೆ ಕೊಟ್ಟಿದ್ದಾರೆ. ಕರಾವಳಿಗೆ ದೊಡ್ಡ ಯೋಜನೆಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರಿಗೆ ಕರಾವಳಿ ಕರ್ನಾಟಕದ ಜನರ ಪರವಾಗಿ ಧನ್ಯವಾದಗಳು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು