9:18 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರೀಕ್ಷೆ ಹುಸಿಗೊಳಿಸಿದ ಬಜೆಟ್: ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಟೀಕೆ

07/07/2023, 23:50

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್ಟಿನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ.
ದ.ಕ ಜಿಲ್ಲೆ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹೇಳಿದ್ದಾರೆ.
ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಯಾವುದೇ ಘೋಷಣೆಗಳಿಲ್ಲ, ಅತಿಥಿ ಶಿಕ್ಷಕರ, ಉಪನ್ಯಾಸಕರ ಖಾಯಮಾತಿಗೆ ಯಾವುದೇ ಚಕಾರ ಎತ್ತದ ಬಜೆಟ್ ಮಂಡಿಸಿದ್ದಾರೆ.
ಬಿಬಿಎಂಪಿ ಚುನಾವಣೆಯ ದೃಷ್ಟಿಕೋನದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೊಟ್ಟು ಇತರ ನಗರದ ಜನರಿಗೆ ಅನ್ಯಾಯ ಮಾಡಲಾಗಿದೆ.
ಹೊಸ ಶಿಕ್ಷಣ ನೀತಿಯನ್ನು ರದ್ದೂಗೊಳಿಸಿರುವುದು ಮತ್ತು ಕೇಂದ್ರ ರದ್ದುಪಡಿಸಿದ್ದ ಎಪಿಎಂಸಿ ಕಾಯ್ದೆಯನ್ನು ವಾಪಸ್ ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ ಆದರೆ ಐದು ಗ್ಯಾರೆಂಟಿಗಳಿಗೆ ಹಣ ಹೊಂದಿಸುವ ಭರದಲ್ಲಿ ಮತ್ತು ರಾಜಸ್ವ ಸಂಗ್ರಹದಲ್ಲಿ ಹೆಚ್ಚಳ ಮಾಡುವ ತರಾತುರಿಯಲ್ಲಿ ಅಬಕಾರಿ, ಸ್ಟ್ಯಾಂಪಿಗ್, ದ್ವಿಚಕ್ರ ಮತ್ತು ಇತರ ವಾಣಿಜ್ಯ ವಾಹನಗಳ ಮೇಲಿನ ತೆರಿಗೆ ಏರಿಕೆ ಮಾಡಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಬಜೆಟ್ ಮಂಡಿಸಿದ್ದಾರೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು