2:08 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕುಡಿತದ ಮತ್ತಿನಲ್ಲಿ ಸರಕಾರಿ ಬಸ್ ಮೇಲೆ ಮದ್ಯದ ಬಾಟಲಿ ಎಸೆತ; ಚಾಲಕನಿಗೆ ಹಿಗ್ಗಾಮುಗ್ಗ ಥಳಿತ: 4 ಮಂದಿ ಪುಂಡರ ಬಂಧನ

08/07/2023, 12:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎಣ್ಣೆಯ ಮತ್ತಿನಲ್ಲಿದ್ದ ನಾಲ್ವರು ಯುವಕರು ಕೆಎಸ್ಸಾರ್ಟಿಸಿ ಬಸ್ ಮೇಲೆ ಖಾಲಿ ಮಧ್ಯದ ಬಾಟಲಿ ಎಸೆದು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಕುಡಿದ ಮತ್ತಿನಲ್ಲಿ ಕಿರಣ್, ಸತೀಶ್, ಸಚಿನ್ ಹಾಗೂ ಸುಪ್ರೀತ್ ಎಂದು ಗುರುತಿಸಲಾಗಿದೆ.
ಪುಂಡರ ದಾಂಧಲೆಯಿಂದ ಬಸ್ಸಿನ ಮುಂಭಾಗದ ಗ್ಲಾಸ್ ಪುಡಿಯಾಗಿದೆ. ಚಾಲಕ ಗಾಯಗೊಂಡಿದ್ದಾರೆ.


ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಚಲಿಸುತ್ತಿದ್ದ ಕಾರಿನಿಂದ ಬಸ್ಸಿನ ಮುಂಭಾಗದ ಗ್ಲಾಸಿಗೆ ಯುವಕರ ತಂಡ ಮದ್ಯದ ಬಾಟಲಿ ಎಸೆದಿತ್ತು. ಇದನ್ನು ಪ್ರಶ್ನಿಸಿದ ಚಾಲಕ ಸತೀಶ್ ಅವರಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದರು.
ಹಲ್ಲೆಗೊಳಗಾದ ಡ್ರೈವರ್ ಸತೀಶ್ ಅವರನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು