4:08 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಆಸ್ಪತ್ರೆಗೆ ಭೇಟಿ: ನಂದಾವರದಲ್ಲಿ ಗುಡ್ಡ ಜರಿದು ಗಾಯಗೊಂಡ ಮಹಿಳೆಯ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

10/07/2023, 09:41

ಬಂಟ್ವಾಳ(reporterkarnataka.com): ಮನೆಯೊಂದಕ್ಕೆ ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಘಟನೆಯಲ್ಲಿ ಸಫಾಳ ತಾಯಿ ಮೃತಪಟ್ಟಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಅವರು ಕುಟುಂಬಕ್ಕೆ ಭರವಸೆ ನೀಡಿದರು.


ಸರಕಾರದಿಂದ ಸಿಗಬೇಕಾದ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.
ಘಟನೆ ನಡೆದ ಸಂದರ್ಭದಲ್ಲಿ ಶಾಸಕರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಇಂದು ಬೆಳಿಗ್ಗೆ ಆಸ್ಪತ್ರೆಗೆ ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಘಟನೆ ವಿವರ: ಜುಲೈ 7 ರಂದು ಸಜೀಪ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ನಂದಾವರ ಗುಂಪು ಮನೆಯೊಂದಕ್ಕೆ ಬೆಳಿಗ್ಗೆ ಸುಮಾರು 5.30 ರ ವೇಳೆ ಗುಡ್ಡ ಜರಿದು ಮಹಮ್ಮದ್ ನಂದಾವರ ಅವರ ಪತ್ನಿ ಹಾಗೂ ಮಗಳು ಸಫಾ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು.
ನಿರಂರತವಾಗಿ ಸುರಿಯುವ ಮಳೆ ನಡುವೆಯೂ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಪೋಲೀಸ್ ಇಲಾಖೆಯ ಸಿಬ್ಬಂದಿಗಳ ಕಾರ್ಯಚರಣೆಯಿಂದ ಸಫಾ ಎಂಬವಳನ್ನು ರಕ್ಷಣೆ ಮಾಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಸಫಾ ಅವರ ತಾಯಿ ಝರಿನಾ ಅವರನ್ನು ಮಣ್ಣಿನೊಳಗಿಂದ ಹೊರತೆಗೆದು ಆಸ್ಪತ್ರೆಗೆ ಕೊಂಡುಹೋಗಿ ಪರೀಕ್ಷಿಸಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದರು.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಹಿತ ತಾಲೂಕಿನ ಅಧಿಕಾರಿಗಳು ಬೇಟಿ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು