7:47 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಪಡುಬಿದ್ರೆಯಲ್ಲಿ ಕೊಲೆ ಮಾಡಿ ದೇವರಮನೆ ಬಳಿ ಶವ ಎಸೆದ ಪ್ರಕರಣ: ಮತ್ತೆ 4 ಮಂದಿ ಬಂಟ್ವಾಳದ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೇರಿಕೆ

10/07/2023, 18:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲ್ಲೂಕು ಮಂಚಿ ಗ್ರಾಮದ ದಾವೂದ್ ಅಮೀರ್(25), ಅಬ್ದುಲ್ ರಹೀಜ್(23), ಬಂಟ್ವಾಳ ತಾಲ್ಲೂಕು ಕವಾಲ ಮಡೂರು ಗ್ರಾಮದ ಆಫ್ರಿದಿ(23), ಮಹಮ್ಮದ್ ಇರ್ಷಾದ್(20) ಎಂದು ಗುರುತಿಸಲಾಗಿದೆ.

ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.
ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.
ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು