12:25 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜೈನ ಮುನಿ ಹತ್ಯೆ: ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

10/07/2023, 18:27

ಕಾರ್ಕಳ(reporterkarnataka.com): ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ,ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ಸಂದೇಶವನ್ನು ಸಾರುತ್ತಿದ್ದ ಜೈನ ಮುನಿಗಳ ಹತ್ಯೆ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಮಾನವ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ. ಈ ಅಮಾನವೀಯ ಕ್ರತ್ಯವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡಿಸಿದ್ದಾರೆ ಮನುಕುಲದ ಸೇವೆಗಾಗಿ ತಮ್ಮ ಆಶೆ , ಆಕಾಂಕ್ಷೆ , ಆಸ್ತಿ , ಸಂಪತ್ತು , ಕುಟುಂಬವನ್ನು ತ್ಯಜಿಸಿರುವ ಜೈನ ಮುನಿಗಳು ಒಂದು ಸಮುದಾಯಕ್ಕೆ ಸೀಮಿತವಾಗದೆ ಜಗತ್ತಿಗೆ ಶಾಂತಿ, ಅಹಿಂಸೆ ಸಂದೇಶ ನೀಡುವವರು. ಅವರ ಸದ್ಗುಣ, ಸಹಾಯವನ್ನು ದುರುಪಯೋಗ ಮಾಡಿಕೊಂಡು ಕೊಲೆ ಮಾಡುವ ಮಟ್ಟಕ್ಕೆ ಇಳಿದಿರುವ ಕೊಲೆಗಡುಕರನ್ನು ಸರಕಾರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಂಡು ತಕ್ಷಣವೇ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು