9:18 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪಿಂಚಣಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ: ಖಜಾನೆ ಡೆಪ್ಯುಟಿ ಅಕೌಂಟೆಂಟ್ ಜನರಲ್ ರಾಜರಾಜೇಶ್ವರಿ

11/07/2023, 20:44

ಮಂಗಳೂರು(reporterkarnataka.com): ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳ ಸಭೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜು.11ರ ಬುಧವಾರ ನಡೆಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಅದಾಲತ್‍ನಲ್ಲಿ 50ಕ್ಕೂ ಹೆಚ್ಚಿನ ಪಿಂಚಣಿದಾರರು ಭಾಗವಹಿಸಿದ್ದರು. ಜಿಲ್ಲೆಯ ಹಲವು ಪಿಂಚಣಿದಾರರು ಲಿಖಿತವಾಗಿ ಸಮಸ್ಯೆಗಳನ್ನು ತಿಳಿಸಿದರು.

ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಡೆಪ್ಯುಟಿ ಅಕೌಂಟೆಂಟ್ ಜನರಲ್ ಆರ್. ರಾಜರಾಜೇಶ್ವರಿ ಅವರು ಮಾತನಾಡಿ, ಪಿಂಚಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಕಾಯುವ ಬದಲು ನೇರವಾಗಿ ತಮಗೆ ದೂರವಾಣಿ ಕರೆ ಮಾಡುವ ಮೂಲಕ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳುವಂತೆ ತಿಳಿಸಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕವೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಿಂಚಣಿ ಅದಾಲತ್ ನಡೆಸಿ ಪಿಂಚಣಿದಾರರ ಸಮಸ್ಯೆ ಬಗೆಹರಿಸಲು ಯತ್ನಿಸಲಾಗುತ್ತಿದೆ ಎಂದವರು ಹೇಳಿದರು.
ಇದೇ ಸಂದರ್ಭದಲ್ಲಿ ಅವರು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಸಮಸ್ಯೆಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಳಿಸಿಕೊಂಡರು.
ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಜಂಟಿ ನಿರ್ದೇಶಕಿ ಆರ್. ಮಾಲವಿಕಾ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು