3:22 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತರಕಾರಿ ಅಂಗಡಿಯಿಂದ 3000 ರೂ. ಮೌಲ್ಯದ 40 ಕೆಜಿ ಟಮೋಟೋ ಕಳ್ಳತನ: ದೂರು ದಾಖಲು

12/07/2023, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆಜಿ ಟಮೋಟೋ ಇದ್ದ ಎರಡು ಟ್ರೇ ಕಳ್ಳತನವಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ.
ಆಲ್ದೂರು ಪಟ್ಟಣದ ನದೀಂ ಎಂಬುವರ ಅಂಗಡಿಯಲ್ಲಿ ಎರಡು ಟ್ರೇ ಟಮೋಟೋ ಕಳ್ಳತನವಾಗಿದೆ. ಸೋಮವಾರ ರಾತ್ರಿ ಎಂದಿನಂತೆ ತರಕಾರಿಯನ್ನ ಅಂಗಡಿಯಲ್ಲಿ ಇಟ್ಟು ಟಾರ್ಪಲ್ ಎಳೆದು ಹೋಗಿದ್ದರು. ಆದರೆ, ಮಂಗಳವಾರ ಬೆಳಗ್ಗೆ ಅಂಗಡಿಗೆ ಬಂದಾಗ ಟಮೋಟೋ ಇರಲಿಲ್ಲ. ಆಗ ಅಂಗಡಿಯ ಟಾರ್ಪಲ್ ಸರಿಸಿರುವುದು ಬೆಳಕಿಗೆ ಬಂದಿದೆ. ಆಲ್ದೂರು ಠಾಣೆಯ ಕಾಂಪೌಂಡ್‍ಗೆ ಹೊಂದಿಕೊಂಡಂತಿರುವ ತರಕಾರಿ ಅಂಗಡಿಯಲ್ಲಿ ಟಮೋಟೋ ಕಳ್ಳತನವಾಗಿದ್ದು ಸಾಲ ಮಾಡಿ ತರಕಾರಿ ವ್ಯಾಪಾರ ಮಾಡಿಕೊಂಡು ಬದುಕು ದೂಡುತ್ತಿದ್ದ ನದೀಂ ಅವರು ಅತಂತ್ರಕ್ಕೀಡಾಗಿದ್ದಾರೆ. ಆದರೆ, ನದೀಂ ಅವರ ತರಾಕಾರಿ ಅಂಗಡಿಗೆ ಬಾಗಿಲು ಇರಲಿಲ್ಲ. ಟಾರ್ಪಲ್ ಕಟ್ಟಿ ಹೋಗುತ್ತಿದ್ದರು. ಹೀಗೆ ಟಾರ್ಪಲ್ ಕಟ್ಟಿ ಹೋದಾಗ ಬರುವಷ್ಟರಲ್ಲಿ ರಾತ್ರೋರಾತ್ರಿ ಕಳ್ಳತನವಾಗಿದ್ದು ನದೀಂ ಟಮೋಟೋ ಕಳ್ಳತನವಾಗಿರುವ ಬಗ್ಗೆ ಆಲ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು