9:46 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕಾವೂರು ಪೊಲೀಸರ ಕಾರ್ಯಾಚರಣೆ: ನಿಷೇಧಿತ ಮಾದಕ ದ್ರವ್ಯ, ಮಾರಕ ಆಯುಧ, ಕಾರು ವಶ; ಇಬ್ಬರ ಬಂಧನ

13/07/2023, 12:11

ಮಂಗಳೂರು(reporterkarnataka.com): ಮಾರಕ ಆಯುಧಗಳೊಂದಿಗೆ ನಿಷೇಧಿತ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ನಿಷೇಧಿತ ಮಾದಕ ದ್ರವ್ಯ 4 ಗ್ರಾಂ ಎಂಡಿಎಂಎ ಅನ್ನು 3 ಮಾರಕ ಆಯುಧಗಳೊಂದಿಗೆ ಮಾರಾಟ ಮಾಡಲು ಬಂದವರನ್ನು ಪತ್ತೆ ವಶಪಡಿಸಿಕೊಳ್ಳುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಪಿಲಿಕುಳದ ಮೊಹಮ್ಮದ್ ಶಾರೂಕ್ (27) ಹಾಗೂ ಶೇಡಿಗುರಿಯ ಜಗದೀಶ್‌ (45) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರ ವಶದಲ್ಲಿದ್ದ 4.5 ಗ್ರಾಂ ಎಂಡಿಎಂಎ ಸ್ವಾಧಿನಪಡಿಸಿಕೊಂಡಿದ್ದಾರೆ. 3 ಮಾರಕ ಆಯುಧ ಹಾಗೂ 1 ಮಾರುತಿ ಸ್ವಿಫ್ಟ್ ಕಾರು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 4.41 ಲಕ್ಷ ರೂ. ಆಗಿರುತ್ತದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರ ನಿರ್ದೆಶನದಂತೆ ಡಿಸಿಪಿ (ಕಾ & ಸು) ಮತ್ತು ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ಉತ್ತರ ಉಪ-ವಿಭಾಗದ ಎಸಿಪಿ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಕಾವೂರು ಪೊಲೀಸ್ ನಿರೀಕ್ಷಕರಾದ ಗುರುರಾಜ್ ಮತ್ತು ಪಿಎಸ್ ಐ ಮಲ್ಲಿಕಾರ್ಜುನ ಬಿರಾದಾರ, ಲತೇಶ್ ಹಾಗೂ ಸಿಬ್ಬಂದಿಗಳಾದ ತಾರಾನಾಥ ಪುತ್ರನ್, ಕಿಶೋರ್, ಸಂಭಾಜಿ ಕಾರ್ಯಾಚರಣೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು