1:01 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಚಂಡಮಾರುತ ಎಫೆಕ್ಟ್: ಮಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ

15/05/2021, 10:45

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರಗಳಿಂದ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಮೇ 16ರವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 3 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದ್ದು, ಇದಕ್ಕೆ ತೌಕ್ತೆ ಚಂಡಮಾರುತ ಎಂದು ಹೆಸರಿಡಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಲಿದೆ. ಹೀಗಾಗಿ, ಮುಂದಿನ 1 ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮೇ 15ರಂದು ಮಹಾರಾಷ್ಟ್ರ ಮತ್ತು ಗೋವಾದಲ್ಲಿಯೂ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಮೇ 16ರಂದು ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಅನೇಕ ಜಿಲ್ಲೆಗಳಲ್ಲಿ ಇನ್ನು 3 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. 

15ರಂದು ಚಂಡಮಾರುತದ ಪರಿಣಾಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ನೋಟಿಸ್ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಇಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಇಂದು ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 15ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮೇ 16ರಂದು ಚಂಡಮಾರುತ ಉಂಟಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು