ಇತ್ತೀಚಿನ ಸುದ್ದಿ
ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆಗ್ರಹ
16/07/2023, 14:57
ಮಂಗಳೂರು(reporterkarnataka.com):ವಿಜಯವಾಣಿ ಪುತ್ತೂರು ವರದಿಗಾರ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯ ಖಂಡನೀಯ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ
ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಆಗ್ರಹಿಸಿದ್ದಾರೆ.
ನಿಶಾಂತ್ ಬಿಲ್ಲಂಪದವು ಅವರು ಕಾರ್ಯನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ, ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಜರುಗಿಸಬೇಕು. ಘಟನೆ ಬಗ್ಗೆ ಸರ್ಕಾರ ಗಮನಕ್ಕೆ ತಂದು ಪತ್ರಕರ್ತನಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.