7:59 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ರಾಜ್ಯ ರಾಜಕೀಯ: ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಿದರೆ 12 ಮಂದಿ ಜನತಾ ದಳ ಶಾಸಕರು ಕಾಂಗ್ರೆಸ್ ಗೆ?

16/07/2023, 22:51

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ಕಾರಣ ವರ್ಷದೊಳಗೆ ಮಹಾ ಚುನಾವಣೆ ಎದುರಾಗಲಿದೆ. ಬಿಜೆಪಿಗೆ ಗಳಿಸಿದನ್ನು ಉಳಿಸುವ ಚಿಂತೆಯಾದರೆ, ಕಾಂಗ್ರೆಸಿಗೆ ಹೊಸದಾಗಿ ಪಡೆಯುವ ಚಿಂತೆ ಕಾಡುತ್ತಿದೆ. ಈ ನಡುವೆ ಜಾತ್ಯತೀತ ಜನತಾ ದಳದ ಬೇರೆಯೇ ಆಟ ನಡೆಯುತ್ತಿದೆ.
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ 28 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಚಾಚಿಕೊಂಡಿತ್ತು. ಕಾಂಗ್ರೆಸಿನ ಅತಿರಥ ಮಹಾರಥರೆಲ್ಲ ಆ ಚುನಾವಣೆಯಲ್ಲಿ ಸೋತಿದ್ದರು. ಆದರೆ ರಾಜ್ಯದಲ್ಲಿ ಅಂದಿನ ಪರಿಸ್ಥಿತಿ ಈಗಿಲ್ಲ. ಕಾಂಗ್ರೆಸ್ ನಿಚ್ಚಳ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಪ್ರಧಾನಿ ಮೋದಿ ಬಂದು ಪ್ರಚಾರ ಮಾಡಿದ ಕಡೆಗಳೆಲ್ಲ ಕಾಂಗ್ರೆಸ್ ಗೆದ್ದು ಬಿಟ್ಟಿದೆ. ಬಿಜೆಪಿ ಮೂರಂಕಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಹಾಗೆ ಜಾತ್ಯತೀತ ಜನತಾ ದಳ ತನ್ನ ಬೇರನ್ನು ಭದ್ರವಾಗಿ ಊರಿದ್ದ ಹಳೆ ಮೈಸೂರು ಪ್ರಾಂತ್ಯದಲ್ಲೇ ನೆಲಕಚ್ಚಿದೆ. ಈ ಹಿನ್ನೆಲೆಯಲ್ಲಿ ಜನತಾ ದಳಕ್ಕೆ ಇದೀಗ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಶ್ನೆಯಾಗಿದೆ.
ಕುಮಾರಸ್ವಾಮಿ ಅವರು ಈ ಹಿಂದೆ ಬಿಜೆಪಿ ಜತೆ 20:20 ಸರಕಾರ ಮಾಡಿದ್ದಾರೆ. ಅವರಿಗೆ ಕಮಲ ಪಾಳಯದ ಸಖ್ಯ ಅದೇನು ಅಸಹನೀಯವಲ್ಲ. ಇದೇ ಕಾರಣದಿಂದ ಜನತಾದಳವನ್ನು ಬಿಜೆಪಿ ಜತೆ ವಿಲೀನ ಮಾಡಲು ಅಥವಾ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಲು ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನುವುದು ಈಗ ಹಳೆಯ ವಿಚಾರ. ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟು ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಹೋರಾಟ ನಡೆಸಿದ್ದರು. ಆದರೆ ರಾಜ್ಯದ ಮುಸ್ಲಿಂ ಮತದಾರರು ಕುಮಾರಸ್ವಾಮಿ ಅವರನ್ನು ನಂಬಲಿಲ್ಲ. ಬದಲಿಗೆ ಅವರು ಸಿದ್ದರಾಮಯ್ಯ ಅವರ ಕೈ ಹಿಡಿದರು. ಇದೇ ಕಾರಣದಿಂದ ಕಿಂಗ್ ಮೇಕರ್ ಆಗಬೇಕಿದ್ದ ಜನತಾ ದಳಕ್ಕೆ 20 ಸೀಟುಗಳು ಕೂಡ ಬಂದಿಲ್ಲ. ಇದರಿಂದ ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ ಎಂದು ಅವರ ಆಪ್ತ ವಲಯದವರು ಹೇಳಿಕೊಳ್ಳುತ್ತಿದ್ದಾರೆ. ರಾಜ್ಯದ ಮುಸ್ಲಿಂ ಮತದಾರರು ಕುಮಾರಸ್ವಾಮಿಯ ಕೈ ಹಿಡಿಯಲಿಲ್ಲ. ಇದೀಗ ಕುಮಾರಸ್ವಾಮಿ ಅವರಿಗೂ ಮುಸ್ಲಿಂ ಸಮುದಾಯ ಬೇಕಿಲ್ಲ ಎನ್ನುವಂತೆ ಬಿಜೆಪಿ ಸಖ್ಯಕ್ಕೆ ಹಾತೊರೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಇದೆಲ್ಲ ಬೆಳವಣಿಗೆಯನ್ನು ಆಡಳಿತರೂಢ ಕಾಂಗ್ರೆಸ್ ಮಾತ್ರವಲ್ಲದೆ, ಜನತಾದಳದಿಂದ ಗೆದ್ದು ಬಂದ ಶಾಸಕರು ಕೂಡ ಸೂಕ್ಷ್ಮವಾಗಿ ಅವಲೋಕನ ಮಾಡುತ್ತಿದ್ದಾರೆ. ಜನತಾ ದಳ ಶಾಸಕರ ಪೈಕಿ ಹೆಚ್ಚಿನವರು ಬಿಜೆಪಿ ಜತೆಗಿನ ಸಖ್ಯವನ್ನು ವಿರೋಧಿಸುತ್ತಿದ್ದಾರೆ ಎನ್ನಲಾಗಿದೆ. ಅಕಸ್ಮಾತ್ ಕುಮಾರಸ್ವಾಮಿ ಅವರು ಬಿಜೆಪಿ ಜತೆ ಕೈಜೋಡಿಸಿದರೆ, ಸುಮಾರು 12 ಮಂದಿ ಜನತಾ ದಳ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಜನತಾ ದಳ ಶಾಸಕರ ಜತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು