11:16 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗದಗ: 6ನೇ ರಾಜ್ಯಮಟ್ಟದ ಸಾಂಸ್ಕೃತಿಕ ಸಮ್ಮೇಳನ: ಕರ್ನಾಟಕ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ

18/07/2023, 18:47

ಗುರುರಾಜ್ ಕಾಸರಗೋಡು

info.reporterkarnataka@gmail.com

ಬೆಂಗಳೂರಿನ ಮನೋಹರ ನಾಯಕ ನೇತ್ರತ್ವದ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸಂಸ್ಥೆಯ 6ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಸಮ್ಮೇಳನ ಗದಗದ ಡಾ.ಬಿ. ಆರ್. ಅಂಬೇಡ್ಕರ ಸಭಾಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸುಂದರ ಸಮ್ಮೇಳನವು ಗದಗ ಜಿಲ್ಲೆಯ ಪ್ರಸಿದ್ಧ ಸಾಹಿತಿ ಎಫ್. ಪಿ. ಲಕ್ಷ್ಮೇಶ್ವರಮಠ ‌ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಿತು.


ಈ ಸಮಾರಂಭದ ಉದ್ಘಾಟನೆಯನ್ನು ಜ್ಞಾನಯೋಗಶ್ರಮ ವಿಜಯಪುರದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಕಪ್ಪತ್ತಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠ ಡೋಣಿ ಗದಗದ ಶ್ರೀ ಮಾ ನಿ ಪ್ರ ಶಿವಕುಮಾರ ಮಹಾಸ್ವಾಮಿಗಳು, ಶ್ರೀ ದೊರೆಸ್ವಾಮಿ ವೀರಕ್ತ ಮಠ ಬೈರನ ಹಟ್ಟಿ ನರಗುಂದದ ಶ್ರೀ ಮಾ ನಿ ಪ್ರ ಶಾಂತಲಿಂಗ ಮಹಾಸ್ವಾಮಿಗಳು ಅವರ ಉಪಸ್ಥಿತಿಯಲ್ಲಿ ನಡೆಯಿತು. ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಮನೋಹರ ನಾಯಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಸಮಾರಂಭದ ಮುಖ್ಯ ಬಿಂದುವಾಗಿ ಗದಗ ಜಿಲ್ಲೆಯ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ್ ಅವರು ಭಾಗವಹಿಸಿ ಹಿತ ನುಡಿಗಳನ್ನಾಡಿದರು. ಹೀಗೆ ಹಲವಾರು ಗಣ್ಯಾತಿಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಭವ್ಯ ಸಮ್ಮೇಳನದಲ್ಲಿ ಸಂಸ್ಥೆಯ ಗದಗ ಜಿಲ್ಲಾ ಘಟಕದ ಉದ್ಘಾಟನೆ, ಪದಾಧಿಕಾರಿಗಳ ಸೇವಾದೀಕ್ಷೆ, ಕವಿಪೀಠ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ, ಸರ್ವಾಧ್ಯಕ್ಷರ ಬದುಕು ಬರಹ ಕೈಪಿಡಿ ಬಿಡುಗಡೆ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರಾಜ್ಯದ ಮೂಲೆ ಮೂಲೆಗಳಿಂದ ಬಂದಂತ ಹಲವಾರು ಕ್ಷೇತ್ರದ ಸಾಧಕರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ನೆರೆದಿರುವ ಸರಿ ಸುಮಾರು ಸಾವಿರಾರು ಕಲಾರಾಧಕ ಮನಸ್ಸುಗಳ ಸಮ್ಮುಖದಲ್ಲಿ ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಕರ್ನಾಟಕದ ಗಡಿ ಪ್ರದೇಶವಾದ ಕಾಸರಗೋಡು ಜಿಲ್ಲೆಯಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಾ, ಹಲವಾರು ಕಲಾವಿದರಿಗೆ ವೇದಿಕೆ ಅವಕಾಶ ನೀಡಿ ಗುರುತಿಸಿ ಪ್ರಶಸ್ತಿ ಪುರಸ್ಕಾರ ನೀಡಿ ಅವರ ಕಲೆಗೆ ಗಟ್ಟಿ ಪ್ರೋತ್ಸಾಹ ನೀಡುತ್ತಾ ಗಡಿನಾಡಿನಲ್ಲಿ ಕನ್ನಡದ ಕಂಪನ್ನು ಹರಡಿಸುತ್ತಿರುವ ಗಡಿನಾಡ ಕನ್ನಡತಿ ಡಾ. ವಾಣಿಶ್ರೀ ಕಾಸರಗೋಡು ಇವರನ್ನು ” ಕರ್ನಾಟಕ ಸಾಂಸ್ಕೃತಿಕ ರತ್ನ ” ಎಂಬ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ವಿಶೇಷವಾಗಿ ರಾಜರ ಕಾಲದ ಕವಿಗೋಷ್ಠಿಯ ತರಹ ಪ್ರತಿಯೊಂದು ಕವಿಯನ್ನು ಪೀಠದ ಮೇಲೆ ಕುಳ್ಳಿರಿಸಿ ವಿಶೇಷವಾಗಿ ಗೌರವಸಿ ಕವನವನ್ನು ವಾಚಿಸಲಾಯಿತು. ಗಾಯನ, ನೃತ್ಯ, ಬುಡಕಟ್ಟು ಜನಾಂಗದವರಿಂದ ವಿದ ವಿದವಾದ ಬಂಜಾರ ನೃತ್ಯ ಹೀಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ವೈಭವವಾಗಿ ನೆರವೇರಿದವು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮನೋಹರ ನಾಯಕ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು