3:48 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಐಕಳ ಮನೆ ಕಳ್ಳತನ ಪ್ರಕರಣ: ಸಿಸಿಬಿ ಕಾರ್ಯಾಚರಣೆ; ಮತ್ತೋರ್ವ ಆರೋಪಿಯ ದಸ್ತಗಿರಿ; ಬಂಧಿತರ ಸಂಖ್ಯೆ 3ಕ್ಕೇರಿಕೆ

18/07/2023, 20:19

ಮಂಗಳೂರು(reporterkarnataka.com): ನಗರದ ಹೊರವಲಯದ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೇರಿದೆ.
ಜನವರಿ 1 ಮತ್ತು 2ರ ಮಧ್ಯೆ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವು ಮಾಡಲಾಗಿತ್ತು. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು.
ಈ ಪ್ರಕರಣದಲ್ಲಿ ತನಿಖೆ ಕೈಗೊಂಡ ಸಿಸಿಬಿ ಎಸಿಪಿ ಪಿ. ಎ. ಹೆಗಡೆ ನೇತ್ರತ್ವದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ರೂ. 56,50,000/-ಚಿನ್ನಾಭರಣಗಳು, ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದರು. ಇದೀಗ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕಳವು ಮಾಡಿದ ಮನೆಯನ್ನು ತೋರಿಸಿಕೊಟ್ಟು ಕಳವಿನ ಸಹಕರಿಸಿದ ಆರೋಪಿಯಾದ ಬೊಂಡತಿಲ ನಿವಾಸಿಯಾದ
ಮಹಮ್ಮದ್ ಶರೀಪ್(40) ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ಚಿನ್ನದ ಪೆಂಡೆಂಡ್ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು