5:27 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್

19/07/2023, 10:42

ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು.
ನಗರದ ಬೆಂಗ್ರೆ ಸ್ಯಾಂಡ್ಸ್ ಪಿಟ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕನ್ನಡ ಭಾವಗೀತೆಗಳನ್ನು ಹಾಡುವ ಮಕ್ಕಳ ಉತ್ಸಾಹವನ್ನು ಕೊಂಡಾಡಿದ ಅವರು , ಅಧ್ಯಯನ, ಪ್ರತಿಭೆ ಮತ್ತು ಹವ್ಯಾಸಗಳ ಮೂಲಕ ಜೀವನದಲ್ಲಿ ಯಶಸ್ಸು ಗಳಿಸುವ ದಾರಿಯನ್ನು ತಿಳಿಸಿಕೊಟ್ಟರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಗೀತ ಗಾಯನ ಸ್ಪರ್ಧೆ 7ನೇ ತರಗತಿ ವಿಭಾಗದಲ್ಲಿ ನವ್ಯ ( ಪ್ರಥಮ ) ಗಂಗಮ್ಮ ( ದ್ವಿತೀಯ ) ಗೌತಮ್ ( ತೃತೀಯ ) , 6 ನೇ ತರಗತಿ ವಿಭಾಗದಲ್ಲಿ ಹವಿಶ ( ಪ್ರಥಮ ) ದಿಯಾ ( ದ್ವಿತೀಯ ) ಅನುಷ್ಕಾ ( ತೃತೀಯ ) ಹಾಗೂ 1ರಿಂದ 4 ನೆಯ ತರಗತಿ ವಿಭಾಗದಲ್ಲಿ ಡಿಂಪಲ್ ( ಪ್ರಥಮ ) ನಿಹಾರಿಕಾ ( ದ್ವಿತೀಯ ) ತನು ( ತೃತೀಯ ) ಬಹುಮಾನ ಪಡೆದರು.ತಾಲೂಕು ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ವಿದ್ಯಾರ್ಥಿಗಳ ಗಾಯನದ ಬಗ್ಗೆ ಹರ್ಷ ವ್ಯಕ್ತ ಪಡಿಸುತ್ತಾ ಉಪಯುಕ್ತ ಸಲಹೆಗಳನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಉಮಾಲಕ್ಷ್ಮೀ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಇನ್ನಷ್ಟು ಇಂತಹ ಕಾರ್ಯಕ್ರಮಗಳಾಗಲಿ ಎಂದು ಹಾರೈಸಿದರು.
ಶಿಕ್ಷಕಿ ಸುಮಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ವರ್ಗದ ಉಷಾ ಕೆ , ಅಶ್ವಿನಿ , ಶೀತಲ್ , ದೀಪಾ ಉಪಸ್ಥಿತರಿದ್ದು ಸಹಕರಿಸಿದರು. ಸುಮಾರು 80 ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು