7:16 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಅನಾರೋಗ್ಯ: ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಂಗಳೂರಿಗೆ ದೌಡು

22/07/2021, 19:21

ಮಂಗಳೂರು(reporterkarnataka news): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿದರು.


ಗುರುವಾರ ಸಂಜೆ 5.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ಅವರು ಮಂಗಳೂರಿಗೆ ಆಗಮಿಸಿದರು. ಸಂಜೆ 6.10ಕ್ಕೆ ಮಂಗಳೂರಿಗೆ ಆಗಮಿಸಿದ ಅವರು ನಂತರ ಪಕ್ಷದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಿದ್ದರಾಮಯ್ಯ ಜತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಮೊಯ್ದೀನ್ ಬಾವಾ, ಐವನ್ ಡಿಸೋಜ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮುಂತಾದವರು ಉಪಸ್ಥಿತರಿದ್ದರು.
ಆಸ್ಕರ್ ಫೆರ್ನಾಂಡಿಸ್ ಅವರು ಯೋಗಾಭ್ಯಾಸದ ವೇಳೆ ತನ್ನ ಅತ್ತಾವರದ ಫ್ಲ್ಯಾಟ್ ನಲ್ಲಿ ಬಿದ್ದು ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು