3:54 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎರಡು ಪ್ರತ್ಯೇಕ ಪ್ರಕರಣ: 53 ಸಾವಿರ ರೂ. ಮೌಲ್ಯದ ಬಾಂಗ್ ಮಿಶ್ರಿತ ಚಾಕಲೇಟ್ ವಶ: ಇಬ್ಬರ ಮೇಲೆ ಕೇಸು ದಾಖಲು

20/07/2023, 21:28

ಮಂಗಳೂರು(reporterkarnataka.com): ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಾಂಗ್ ಮಿಶ್ರಿತ ಚಾಕಲೇಟ್ ಮಾರುತ್ತಿದ್ದ ಆರೋಪದ ಮೇಲೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, 53,500 ರೂ. ಮೌಲ್ಯದ ಬಾಂಗ್ ಮಿಶ್ರಿತ ಚಾಕಲೇಟ್ ವಶಪಡಿಸಿಕೊಂಡಿದ್ದಾರೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿ ನಗರದ ಹೈಲ್ಯಾಂಡ್ ಬಳಿ ಗೂಡಂಗಡಿಯಲ್ಲಿ ಬಾಂಗ್ ಮಿಶ್ರಿತ ಚಾಕೋಲೇಟ್ ನ್ನು ಮಾರಾಟ ಮಾಡುತ್ತಿದ್ದ ಆರೋಪಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45) ಎಂಬಾತನಿಂದ 5,500 ರೂ. ಮೌಲ್ಯದ ಹಿಂದಿ ಭಾಷೆಯಲ್ಲಿ “ಮಹಾಶಕ್ತಿ ಮುನಕ್ಕಾ”, “ಬಮ್ ಬಮ್ ಮುನಕ್ಕಾ ವಟಿ” “ಪಾವರ್ ಮುನಕ್ಕಾ ವಟಿ” ಹಾಗೂ “ಆನಂದ ಚೂರ್ಣ” ಎಂದು ನಮೂದು ಇರುವ ಬಾಂಗ್‌ ಚಾಕೋಲೆಟ್ ತುಂಬಿರುವ ಪ್ಲಾಸ್ಟಿಕ್ ಪ್ಯಾಕೇಟ್ ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಮಂಗಳೂರು ಉತ್ತರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ನಗರದ ಕಾರ್ ಸ್ಟ್ರೀಟ್ ಬಳಿ ಬಾಂಗ್ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡುತ್ತಿದ್ದ ಮನೋಹರ್ ಶೇಟ್ (49 ) ಎಂಬಾತನ ವಶದಿಂದ ಮೂರು ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ಇಟ್ಟಿದ್ದ ಸುಮಾರು 48,000 ರೂ. ಮೌಲ್ಯದ ಬಾಂಗ್ ನ್ನು ಸ್ವಾಧೀನಪಡಿಸಿಕೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು