ಇತ್ತೀಚಿನ ಸುದ್ದಿ
ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಮೃತದೇಹ ಪತ್ತೆ: ಮಳೆಗೆ ಸಾವಿನ ಸಂಖ್ಯೆ 2ಕ್ಕೇರಿಕೆ
21/07/2023, 13:31
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ನದಿಗೆ ಬಿದ್ದ ಮಹಿಳೆಯ ಮೃತದೇಹ ಹೇಮಾವತಿ ನದಿ ದಡದಲ್ಲಿ ಪತ್ತೆಯಾಗಿದ್ದು, ಇದರೊಂದಿಗೆ ಮಳೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ.
ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ದೇವಮ್ಮ (61 ) ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹ ಹೇಮಾವತಿ ನದಿಯ ದಡದಲ್ಲಿ ಸಿಲುಕಿದ್ದು ಸ್ಥಳೀಯರ ನೆರವಿನಿಂದ ಪೊಲೀಸರು ಮೇಲೆತ್ತಿದ್ದಾರೆ.
ಧಾರಾಕಾರ ಮಳೆಯಿಂದ ಹೇಮಾವತಿ ನದಿ ತುಂಬಿ ಹರಿಯುತ್ತಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.