4:13 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಂಗಳೂರು: ಬ್ಯಾಂಕ್ ಆಫ್ ಬರೋಡಾದ 116ನೇ ಸಂಸ್ಥಾಪನಾ ದಿನಾಚರಣೆ

21/07/2023, 21:10

ಮಂಗಳೂರು(reporterkarnataka.com): ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) 116ನೇ ಸಂಸ್ಥಾಪನಾ ದಿನದ ಕಾರ್ಯಕ್ರಮ ನಗರದ ಉರ್ವಾದ ಡಾ. ಅಂಬೇಡ್ಕರ್ ಭವನದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ, ಬ್ಯಾಂಕ್ ಸ್ವ ಸಹಾಯ ಸಂಘಗಳ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿದೆ. ಉತ್ತಮ ಮನೆ, ಉತ್ತಮ ಆಸ್ಪತ್ರೆಗಳ ಸೇವೆ ಈ ಎಲ್ಲಾ ಬೇಡಿಕೆಗಳನ್ನು ಸೇರಿದಂತೆ ಸೂಕ್ತ ಸ್ಪಂದನೆ ಬ್ಯಾಂಕಿನಿಂದ ದೊರೆಯುವಂತಾಗಲಿ ಎಂದರು.
ಬ್ಯಾಂಕ್ ಆಫ್ ಬರೋಡಾದ ಮಹಾಪ್ರಬಂಧಕಿ ಹಾಗೂ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್. ಮಾತನಾಡಿ, 1908ರಲ್ಲಿ ಮಹಾರಾಜಾ ಮೂರನೇ ಸಯ್ಯಾಜಿರಾವ್ ಗಾಯಕ್‌ವಾಡ್ ಅವರಿಂದ ಸ್ಥಾಪಿಸಲ್ಪಟ್ಟು ವಿಶಾಲವಾಗಿ 17 ದೇಶಗಳು ಸೇರಿದಂತೆ 8200 ಶಾಖೆಗಳನ್ನು ಹೊಂದಿರುವ ಬಲಿಷ್ಠ ಬ್ಯಾಂಕ್ ಆಗಿ ಬೆಳೆದಿದೆ ಎಂದರು.
ವಿಜಯ ಬ್ಯಾಂಕ್, ದೇನಾ ಬ್ಯಾಂಕ್‌ಗಳನ್ನೂ ಈಗ ಬ್ಯಾಂಕ್ ಆಫ್ ಬರೋಡಾ ಒಳಗೊಂಡಿದೆ. ಪ್ರಸ್ತುತ ಬ್ಯಾಂಕ್ 116ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದು, ಈ ವರ್ಷ ಸಾಧಿಸು, ಸಹಯೋಗ ನೀಡು ಹಾಗೂ ಉತ್ಕೃಷ್ಟನಾಗು ಎನ್ನುವ ವಿಷಯವನ್ನು ಆರಿಸಿಕೊಂಡಿದೆ ಎಂದು ಅವರು ನುಡಿದರು.
ಬ್ಯಾಂಕ್ ಆಫ್ ಬರೋಡಾ – ಮಾಜಿ ಕಾರ್ಯ ನಿರ್ವಾಹಕ ನಿರ್ದೇಶಕರಾದ ಕೆ.ಆರ್. ಶೆಣೈ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ, ಬ್ಯಾಂಕ್ ಆಫ್ ಬರೋಡಾದಲ್ಲಿನ ತಮ್ಮ ಅನುಭವ ವ್ಯಕ್ತಪಡಿಸಿ, ಬ್ಯಾಂಕ್ ಆಫ್ ಬರೋಡಾ ಸಧೃಡವಾಗಿದ್ದು, ಇದರಲ್ಲಿ ವಿಲೀನಗೊಂಡಿರುವ ಇತರ ಬ್ಯಾಂಕ್‌ಗಳ ಸಿಬ್ಬಂದಿ ಅದೃಷ್ಟವಂತರು ಎಂದು ಹೇಳಿದರು.
ಬ್ಯಾಂಕ್ ಸಿಎಸ್‌ಆರ್ ಭಾಗವಾಗಿ ಮಂಗಳಸೇವಾ ಸಮಿತಿ ತೊಕ್ಕೊಟ್ಟು, ಸ್ನೇಹದೀಪ ಬಿಜೈ, ಸ್ವಾಮಿ ಶ್ರದ್ಧಾನಂದ ಸೇವಾಶ್ರಮಗಳಿಗೆ ನೆರವು ನೀಡಲಾಯಿತು. ಬ್ಯಾಂಕ್‌ನ ವಲಯ ಉಪಮುಖ್ಯಸ್ಥ ರಮೇಶ್ ಕಾನಡೆ, ಡಿಜಿಎಂ ನೆಟ್‌ವರ್ಕ್ ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು.
ಉಪ ವಲಯ ಮುಖ್ಯಸ್ಥರಾದ ರಮೇಶ್ ಕಾನಡೆ ಮತ್ತು ಡಿಜಿಎಂ-ನೆಟ್ವರ್ಕ್ ಅಶ್ವಿನಿ ಕುಮಾರ್ ಅವರು ಧ್ವಜಾರೋಹಣ ಮಾಡಿದರು. ಪ್ರಾದೇಶಿಕ ವ್ಯವಸ್ಥಾಪಕ ಎಂ.ವಿ.ಎಸ್. ಪ್ರಸಾದ್ ಸ್ವಾಗತಿಸಿದರು. ಅನಿತಾ ನಿರೂಪಿಸಿದರು. ಪ್ರಾದೇಶಿಕ ಕಚೇರಿ ಉಪ ವಲಯ ವ್ಯವಸ್ಥಾಪಕ ರಾಜೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು