ಇತ್ತೀಚಿನ ಸುದ್ದಿ
ಬಿಜೈ ಕಾಪಿಕಾಡಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಅಳಪೆ ನಿವಾಸಿ ಇಬ್ಬರು ಆರೋಪಿಗಳ ಬಂಧನ; ನ್ಯಾಯಾಲಯಕ್ಕೆ ಹಾಜರು
22/07/2023, 17:34
ಮಂಗಳೂರು(reporterkarnataka.com): ನಗರದ ಬಿಜೈ ಕಾಪಿಕಾಡ್ ನ ಬಳಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸರು ಇಬ್ಬರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನಲ್ಲಿ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಬೀಚ್ ಗೆ ಹೋಗಿ ವಾಪಸ್ಸು ಬರುವಾಗ ಅವರನ್ನು ಹಿಂಬಾಲಿಸಿಕೊಂಡು ಬಂದು ಬಿಜೈ ಕಾಪಿಕಾಡ್ ನ 7 ನೇ ಕ್ರಾಸ್ ನಲ್ಲಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಳಪೆ ನಿವಾಸಿಗಳಾದ ದೀಕ್ಷಿತ್ (32) ಹಾಗೂ ಅಳಪೆ
ಲಾಯ್ಡ್ ಪಿಂಟೋ(32) ಎಂಬವರುಗಳನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಕರಣದ ತನಿಖೆ ನಡೆಯುತ್ತಿದೆ.