8:19 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಸ್ಪೀಕರ್ ಖಾದರ್ ಚಾಲನೆ: ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

22/07/2023, 21:35

ಮಂಗಳೂರು(reporterkarnataka.com): ಅರೋಗ್ಯಪೂರ್ಣ ಶರೀರಕ್ಕೆ ಆಟೋಟ ಸ್ಪರ್ಧೆಗಳು ಸಹಕರಿಯಾಗಿದ್ದು ಯುವಜನರು ಫುಟ್ಬಾಲ್, ಕಬಡ್ಡಿಯಂತಹ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಫುಟ್‌ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆಯುವ 25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಶನಿವಾರ ನಗರದ ನೆಹರೂ ಮೈದಾನ ಫುಟ್‌ಬಾಲ್ ಗ್ರೌಂಡ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಮೇಯರ್ ಜಯಾನಂದ ಅಂಚನ್ ಮಾತನಾಡಿ, ದ ಕ ಜಿಲ್ಲಾ ಫುಟ್ಬಾಲ್ ಸಂಸ್ಥೆಯು ನಿರಂತರವಾಗಿ ಫುಟ್ಬಾಲ್ ಪಂದ್ಯಾಟವನ್ನು ಆಯೋಜಿಸಿ ಯುವಕರನ್ನು ಕ್ರೀಡಾಸಕ್ತಿಗೆ ತೊಡಗಿಸುವ ಕಾರ್ಯ ಅಭಿನಂದನೀಯ ಎಂದರು.
ದ.ಕ ಜಿಲ್ಲಾ ಫುಟ್‌ಬಾಲ್ ಅಧ್ಯಕ್ಷ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ಅಬ್ದುಲ್ ರವೂಫ್, ಶಂಸುದ್ದೀನ್ ಬಂದರ್, ಕ್ರೀಡೋದ್ಯಮಿ ಶರೀಫ್, ಯು.ಆರ್. ಅಕಾಡೆಮಿ ಸ್ಥಾಪಕಾಧ್ಯಕ್ಷ ಉಮೇಶ್ ಉಚ್ಚಿಲ್, ಯೆನಪೋಯ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಸುಜಿತ್ ಕೆ.ವಿ.ಅಸೋಸಿಯೇಶನ್ ಉಪಾಧ್ಯಕ್ಷ ಬಿ.ಬಿ.ಥೋಮಸ್, ಕಾರ್ಯದರ್ಶಿ ಹುಸೈನ್ ಬೋಳಾರ್, ಖಜಾಂಚಿ ಫಿರೋಜ್ ಉಳ್ಳಾಲ್, ಸದಸ್ಯ ಅಬ್ದುಲ್ ಲತೀಫ್ ಬೆಂಗರೆ ಮೊದಲಾದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಡ್ರಗ್ಸ್ ವಿರುದ್ಧ ಯುವ ಸಮೂಹ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥಾ ನಡೆಯಿತು. ನೆಹರೂ ಮೈದಾನದಿಂದ ಆರಂಭವಾಗಿ ಎ.ಬಿ.ಶೆಟ್ಟಿ ವೃತ್ತ, ಹ್ಯಾಮಿಲ್ಟನ್ ರಾವ್ ಆಂಡ್ ರಾವ್ ಸರ್ಕಲ್, ಲೇಡಿಗೋಷನ್, ಕ್ಲಾಕ್ ಟವರ್ ಮೂಲಕವಾಗಿ ನೆಹರೂ ಮೈದಾನದ ವರೆಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು