4:03 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಉತ್ತರ ಕನ್ನಡ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು; ಮನೆ, ತೋಟಕ್ಕೆ ನುಗ್ಗಿದ ಪ್ರವಾಹ; ಜನಜೀವನ ಅಸ್ತವ್ಯಸ್ತ

23/07/2023, 12:06

ಕಾರವಾರ(reporter Karnataka.com): ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಜನಕಡ್ಕಲ್ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತಾಲೂಕಿನ ಗುಂಡಬಾಳ ನದಿಯಲ್ಲಿ ನೆರೆ ಉಂಟಾಗಿದೆ. ನದಿಯಲ್ಲಿ ನೀರಿನ ಒಳಹರಿವು ಭಾನುವಾರ ಹೆಚ್ಚಳವಾಗಿದೆ. ಇದರ ಪರಿಣಾಮ ನದಿ ಪ್ರದೇಶದ ವ್ಯಾಪ್ತಿಯಲ್ಲಿನ ತೋಟ, ಗದ್ದೆ,ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.


ಗುಂಡಿಬೈಲ್ ಹಿತ್ಲಕೇರಿ, ಚಿಕ್ಕನಕೋಡ ಹಿತ್ಲಕೇರಿ, ಮುಟ್ಟಾ, ಹೆಬೈಲ್, ಕೆಂಚಗಾರ, ಚಿಕ್ಕನಕೋಡ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನದಿ ಅಂಚಿನ ಮನೆಗಳಿಗೆ ನೆರೆಯ ನೀರು ನುಗ್ಗಿದೆ. ಪರಿಣಾಮ ಜನರು ಆತಂಕದಲ್ಲಿ ಇದ್ದಾರೆ. ನದಿಯ ನೀರಿನ ಹರಿವು ಹೆಚ್ಚಾದಂತೆ ಮನೆಯ ಒಳಗೆ ಹೋಗುವ ಸಾಧ್ಯತೆ ಇದ್ದು, ದೋಣಿಯ ಮೂಲಕ ಜನ,ಜಾನುವಾರು ಸಾಗಾಟಕ್ಕೆ ತಾಲ್ಲೂಕು ಆಡಳಿತ ಸಜ್ಜಾಗಿದೆ.
ಕಾಳಜಿ ಕೇಂದ್ರಕ್ಕೆ ಜನರು ತೆರಳಲು ಸಿದ್ದವಾಗಿದ್ದಾರೆ. ಜನರನ್ನು ಸುರಕ್ಷಿತ ಪುನರ್‌ ವಸತಿಗೆ ಗ್ರಾಮ ಪಂಚಾಯಿತಿ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರದಲ್ಲಿ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ನೋಡಲ್ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.
ಸ್ಥಳೀಯರ ತೋಟ, ಗದ್ದೆಗಳಿಗೆ ನೀರು ನುಗ್ಗಿದ್ದು, ಜನರು ಜಾನುವಾರುಗಳ ಜತೆಗೆ ಸ್ಥಳಾಂತರಕ್ಕೆ ಅಗತ್ಯ ಸಿದ್ದತೆಗಳು ಮಾಡಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಬಾಸ್ಕೇರಿ ಹೊಳೆಯಲ್ಲಿ ಕೂಡ ನೀರು ತುಂಬಿ ಹರಿಯುತ್ತಿದೆ. ನದಿ ಅಂಚಿನ ತೋಟಗಳು ಜಲಾವೃತ ಆಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು