12:58 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಕೋವಿಡ್ ಲಸಿಕೆ

15/05/2021, 19:38

ಕೋಲಾರ(reporterkarnataka news): ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ , ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ . ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು . 

ಇಂದು ಪತ್ರಕರ್ತರ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ , ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಸರ್ಕಾರ ಪತ್ರಕರ್ತರನ್ನು ಪ್ರಂಟ್‌ಲೈನ್ ವರ್ಕರ್ ಎಂದು ಘೋಷಿಸಿರುವುದು ಸಂತೋಷದ ವಿಷಯವಾಗಿದೆ . ಎಲ್ಲಾ ಪತ್ರಕರ್ತರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಇದರ ಸದುಪಯೋಗವನ್ನು ಸದ್ಬಳಕೆ ಮಾಡಿಕೊಳ್ಳಬೇಕು . ಇದುವರೆಗೆ 140 ಪತ್ರಕರ್ತರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದರು . ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕೆ ನೀಡುವುದರ ಬಗ್ಗೆ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ.ಮುನಿರಾಜು , ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ , ಖಜಾಂಚಿ ಎ.ಜಿ.ಸುರೇಶ್ ಕುಮಾರ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು